‘ಆಚಾರ್​ ಆ್ಯಂಡ್​ ಕೋ’ ಗೆದ್ದ ಬಳಿಕ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಮುಂದೆ ಇದೆ ದೊಡ್ಡ ಸವಾಲು

Updated on: Jul 31, 2023 | 9:05 PM

Ashwini Puneeth Rajkumar: ‘ಪಿಆರ್​ಕೆ ಪ್ರೊಡಕ್ಷನ್ಸ್​’ ಮೂಲಕ ಮುಂಬರುವ ಸಿನಿಮಾಗಳ ಬಗ್ಗೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಮಾಹಿತಿ ನೀಡಿದ್ದಾರೆ. ಅಲ್ಲದೇ ತಮ್ಮ ಎದುರು ಇರುವ ಸವಾಲಿನ ಬಗ್ಗೆಯೂ ಮಾತನಾಡಿದ್ದಾರೆ.

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ‘ಪಿಆರ್​ಕೆ ಪ್ರೊಡಕ್ಷನ್ಸ್​’ (PRK Productions) ಆರಂಭಿಸಿದ್ದರು. ಅದರ ಜವಾಬ್ದಾರಿಯನ್ನು ಈಗ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಹೊತ್ತುಕೊಂಡಿದ್ದಾರೆ. ಈ ಬ್ಯಾನರ್​ ಮೂಲಕ ನಿರ್ಮಾಣವಾದ ‘ಆಚಾರ್​ ಆ್ಯಂಡ್​ ಕೋ’ (Achar & Co) ಸಿನಿಮಾ ಗೆದ್ದಿದೆ. ಈಗ ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಅವರ ಮುಂದೆ ನಿಜವಾದ ಸವಾಲು ಇದೆ. ಏನದು? ಒಳ್ಳೆಯ ಕಥೆ ಮತ್ತು ನಿರ್ದೇಶಕರನ್ನು ಸೆಲೆಕ್ಟ್​ ಮಾಡುವುದು. ಅದೇ ದೊಡ್ಡ ಸವಾಲು. ಈ ಬಗ್ಗೆ ‘ಆಚಾರ್​ ಆ್ಯಂಡ್​ ಕೋ’ ಚಿತ್ರದ ಸಕ್ಸಸ್​ ಮೀಟ್​ನಲ್ಲಿ ಅವರು ಮಾತನಾಡಿದ್ದಾರೆ. ಸದ್ಯ ‘ಪಿಆರ್​ಕೆ ಪ್ರೊಡಕ್ಷನ್ಸ್​’ ಮೂಲಕ ಮುಂಬರುವ ಸಿನಿಮಾಗಳ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More