ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್​; ಇಲ್ಲಿದೆ ವಿಡಿಯೋ

ಪುನೀತ್​ ರಾಜ್​ಕುಮಾರ್​ ಇಲ್ಲದೇ ಒಂದು ತಿಂಗಳು ಕಳೆದಿದೆ. ಇಂದು (ನ.29) ಅಶ್ವಿನಿ ಪುನೀತ್​ ರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಮುಂತಾದವರು ಅಪ್ಪು ಸಮಾಧಿಗೆ ನಮನ ಸಲ್ಲಿಸಿದ್ದಾರೆ.

ಪ್ರತಿದಿನ ಪುನೀತ್​ ಸಮಾಧಿ ದರ್ಶನಕ್ಕೆ ಸಾವಿರಾರ ಜನರು ಕಂಠೀರವ ಸ್ಟುಡಿಯೋಗೆ ಆಗಮಿಸುತ್ತಲೇ ಇದ್ದಾರೆ. ಅಪ್ಪು ನಮ್ಮನ್ನೆಲ್ಲ ಅಗಲಿ ಇಂದಿಗೆ (ನ.29) ಸರಿಯಾಗಿ ಒಂದು ತಿಂಗಳು ಕಳೆದಿದೆ. ಇಂದು ಬೆಳಗ್ಗೆ 10 ಗಂಟೆಗೆ ಪುನೀತ್​ ಕುಟುಂಬದವರು ಸಮಾಧಿಗೆ ಪೂಜೆ ಮಾಡಿದ್ದಾರೆ. ಅದಕ್ಕಾಗಿ ಬೆಳಗ್ಗೆಯಿಂದಲೇ ಸಕಲ ಸಿದ್ಧತೆ ಮಾಡಕೊಳ್ಳಲಾಗಿತ್ತು. ಅಶ್ವಿನಿ ಪುನೀತ್​ ರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಸೇರಿದಂತೆ ಡಾ. ರಾಜ್​ ಕುಟುಂಬದ ಎಲ್ಲರೂ ಬಂದು ಅಪ್ಪು ಸಮಾಧಿಗೆ ನಮನ ಸಲ್ಲಿಸಿದ್ದಾರೆ. ಪುನೀತ್​ ನಿಧನರಾಗಿ ಒಂದು ತಿಂಗಳು ಕಳೆದಿರುವ ಹಿನ್ನೆಲೆಯಲ್ಲಿ ಇಂದು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಬರುವ ನಿರೀಕ್ಷೆ ಇದೆ. ಅಪ್ಪು ಸ್ಮರಣಾರ್ಥ ಅನೇಕ ಕಡೆಗಳಲ್ಲಿ ಅಭಿಮಾನಿಗಳು ಹಲವು ಸಮಾಜಮುಖಿ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ. ಪುನೀತ್​ ನೋಡಿಕೊಳ್ಳುತ್ತಿದ್ದ ‘ಪಿಆರ್​ಕೆ ಪ್ರೊಡಕ್ಷನ್ಸ್​’, ‘ಪಿಆರ್​ಕೆ ಆಡಿಯೋ’, ‘ಶಕ್ತಿಧಾಮ’ ಮುಂತಾದ ಸಂಸ್ಥೆಗಳ ಜವಾಬ್ದಾರಿಯನ್ನು ಅವರ ಕುಟುಂಬ ನಿಭಾಯಿಸುತ್ತಿದೆ.

ಇದನ್ನೂ ಓದಿ:

‘ಹೀಗೆಲ್ಲ ಮಾಡಿದ್ರೆ ಪುನೀತ್​ಗೆ ದ್ರೋಹ ಮಾಡಿದಂತೆ ಆಗುತ್ತೆ’; ಅಪ್ಪು​ ಸಮಾಧಿ ಬಳಿ ರಾಘಣ್ಣ ಮಾತು

ಪುನೀತ್​​ ಇಲ್ಲದೇ ಕಳೆಯಿತು ಒಂದು ತಿಂಗಳು; ಕಂಠೀರವ ಸ್ಟುಡಿಯೋದಲ್ಲಿ ಇಂದಿನ ಕಾರ್ಯಗಳೇನು?

Published On - 9:47 am, Mon, 29 November 21

Click on your DTH Provider to Add TV9 Kannada