ಅಭಿಮಾನಿಗಳ ಜೊತೆ ‘ಜಾಕಿ’ ಸಿನಿಮಾ ನೋಡಿದ ಅಶ್ವಿನಿ ಪುನೀತ್ ರಾಜ್ಕುಮಾರ್
Puneeth Rajkumar: ಪುನೀತ್ ರಾಜ್ಕುಮಾರ್ ನಟನೆಯ ‘ಜಾಕಿ’ ಸಿನಿಮಾ ಮರು ಬಿಡುಗಡೆ ಆಗಿದ್ದು, ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಅಭಿಮಾನಿಗಳೊಟ್ಟಿಗೆ ಕೂತು ಸಿನಿಮಾ ವೀಕ್ಷಿಸಿದರು.
ಪುನೀತ್ ರಾಜ್ಕುಮಾರ್ (Puneeth Rajkumar) ಹುಟ್ಟುಹಬ್ಬ ಎರಡು ದಿನಗಳು ಇರುವಂತೆಯೇ ಅವರ ಸೂಪರ್ ಹಿಟ್ ಸಿನಿಮಾ ‘ಜಾಕಿ’ ಮರು ಬಿಡುಗಡೆ ಆಗಿದೆ. ಮಾರ್ಚ್ 15 ರಂದು ‘ಜಾಕಿ’ ಸಿನಿಮಾ ಅದ್ಧೂರಿಯಾಗಿ ಮರು ಬಿಡುಗಡೆ ಆಗಿದ್ದು, ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಪುನೀತ್ ಅವರ ಹೊಸ ಸಿನಿಮಾ ಬಿಡುಗಡೆ ಆದಾಗ ಯಾವ ಉತ್ಸಾಹದಿಂದ ಅಭಿಮಾನಿಗಳು ಅದನ್ನು ಸ್ವಾಗತಿಸುತ್ತಿದ್ದರೋ ಅದೇ ಉತ್ಸಾಹದಲಲ್ಲಿ ‘ಜಾಕಿ’ ಸಿನಿಮಾವನ್ನು ಸ್ವಾಗತಿಸಿದ್ದಾರೆ. ಪುನೀತ್ ರಾಜ್ಕುಮಾರ್ರ ಪತ್ನಿ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಸಹ ಇಂದು ಬೆಳಿಗ್ಗೆಯೇ ಅಭಿಮಾನಿಗಳೊಟ್ಟಿಗೆ ಚಿತ್ರಮಂದಿರಕ್ಕೆ ಬಂದು ಕೆಲ ಕಾಲ ಸಿನಿಮಾ ವೀಕ್ಷಿಸಿದರು. ಈ ಸಂದರ್ಭದಲ್ಲಿ ಅವರೊಡನೆ, ವಿನಯ್ ರಾಜ್ಕುಮಾರ್ ಸಹ ಇದ್ದರು. ರಾಘವೇಂದ್ರ ರಾಜ್ಕುಮಾರ್ ಪತ್ನಿ ಪೂರ್ಣಿಮಾ ಸಹ ಆಗಮಿಸಿ ಸಿನಿಮಾ ವೀಕ್ಷಿಸಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

