ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್ಕುಮಾರ್ ಹಾಗೂ ಅಶ್ವಿನಿ ಪುನೀತ್ರಾಜ್ಕುಮಾರ್; ಇಲ್ಲಿದೆ ವಿಡಿಯೋ
ವೇದಿಕೆಯಿಂದ ಇಳಿಯುವ ಸಂದರ್ಭದಲ್ಲಿ ಶಿವರಾಜ್ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಆತ್ಮೀಯವಾಗಿ ಮಾತನಾಡಿದರು. ಈ ದೃಶ್ಯ ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದೆ.
ಶಿವರಾಜ್ಕುಮಾರ್ (Shivarajkumar) ಅವರ 125ನೇ ಸಿನಿಮಾ ಅಧಿಕೃತವಾಗಿ ಲಾಂಚ್ ಆಗಿದೆ. ಈ ಚಿತ್ರಕ್ಕೆ ‘ವೇದ’ ಎಂದು ಹೆಸರಿಡಲಾಗಿದೆ. ಈ ಚಿತ್ರದ ಫಸ್ಟ್ ಪೋಸ್ಟರ್ ಜೂನ್ 22ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಎ.ಹರ್ಷ ಅವರು ನಿರ್ದೇಶನ ಮಾಡಿದರೆ, ಗೀತಾ ಶಿವರಾಜ್ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth) ಅವರು ಅತಿಥಿಯಾಗಿ ಆಗಮಿಸಿದ್ದರು. ವೇದಿಕೆಯಿಂದ ಇಳಿಯುವ ಸಂದರ್ಭದಲ್ಲಿ ಶಿವರಾಜ್ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಆತ್ಮೀಯವಾಗಿ ಮಾತನಾಡಿದರು. ಈ ದೃಶ್ಯ ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದೆ. ‘ವೇದ’ ಹರ್ಷ ಹಾಗೂ ಶಿವರಾಜ್ಕುಮಾರ್ ಕಾಂಬಿನೇಷನ್ನಲ್ಲಿ ಮೂಡಿ ಬರುತ್ತಿರುವ ನಾಲ್ಕನೇ ಸಿನಿಮಾ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
