ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ
ಬೆಂಗಳೂರಿನ ಸ್ಯಾಂಕಿ ಕೆರೆ ಮುಂಭಾಗದಲ್ಲಿ ಪುನೀತ್ ರಾಜ್‍ಕುಮಾರ್ ಕಂಚಿನ ಪ್ರತಿಮೆ ಲೋಕಾರ್ಪಣೆ ಆಗಿದೆ. 800 ಕೆಜಿ ತೂಕದ ಪ್ರತಿಮೆಯನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅನಾವರಣ ಮಾಡಿದರು. ಈ ವೇಳೆ ಶಾಸಕ ಡಾ. ಅಶ್ವತ್ಥ್ ನಾರಾಯಣ, ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಭಾಗಿ ಆಗಿದ್ದರು.
ಬೆಂಗಳೂರಿನ ಸ್ಯಾಂಕಿ ಕೆರೆ (Sankey Tank) ಮುಂದೆ ಪುನೀತ್ ರಾಜ್‍ಕುಮಾರ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜ್‍ಕುಮಾರ್ (Ashwini Puneeth Rajkumar) ಅವರು 800 ಕೆಜಿ ತೂಕದ ಪ್ರತಿಮೆಯನ್ನು ಅನಾವರಣ ಮಾಡಿದರು. ಈ ವೇಳೆ ಮಲ್ಲೇಶ್ವರದ ಶಾಸಕ ಡಾ. ಅಶ್ವತ್ಥ್ ನಾರಾಯಣ ಮತ್ತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಭಾಗಿ ಆಗಿದ್ದರು. ‘ಪ್ರತಿಮೆ ಚೆನ್ನಾಗಿದೆ. ಅಭಿಮಾನಿಗಳಿಗೆ ಮತ್ತು ಅಶ್ವತ್ಥ್ ನಾರಾಯಣ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು ಅಶ್ವಿನಿ ಪುನೀತ್ ರಾಜ್‍ಕುಮಾರ್. ‘ನಮ್ಮನೆಚ್ಚಿನ ನಟ ಪುನೀತ್ ರಾಜ್‍ಕುಮಾರ್ (Puneeth Rajkumar). ಅವರ ಮೆಚ್ಚಿನ ಸ್ಥಳ ಸದಾಶಿವ ನಗರ. ಇಲ್ಲಿ ಅವರ ಪ್ರತಿಮೆ ಆಗಬೇಕು ಎಂಬ ಬೇಡಿಕೆ ಇತ್ತು. ಇದಕ್ಕೆ ಸ್ಫೂರ್ತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಎಲ್ಲರ ಸಲಹೆ ಪಡೆದು ಪ್ರತಿಮೆ ಮಾಡಲಾಗಿದೆ. ಯುಗಾದಿ ಹಬ್ಬದ ಸಂಧರ್ಭದಲ್ಲಿ ಉದ್ಘಾಟನೆ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೆ, ಅಭಿಮಾನಿಗಳಿಗೆ, ಪುನೀತ್ ಕುಟುಂಬಕ್ಕೆ ಧನ್ಯವಾದಗಳು’ ಎಂದು ಅಶ್ವತ್ಥ್ ನಾರಾಯಣ ಅವರು ಹೇಳಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ

