ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ

Updated on: Mar 20, 2026 | 8:07 PM

ಬೆಂಗಳೂರಿನ ಸ್ಯಾಂಕಿ ಕೆರೆ ಮುಂಭಾಗದಲ್ಲಿ ಪುನೀತ್ ರಾಜ್​ಕುಮಾರ್ ಕಂಚಿನ ಪ್ರತಿಮೆ ಲೋಕಾರ್ಪಣೆ ಆಗಿದೆ. 800 ಕೆಜಿ ತೂಕದ ಪ್ರತಿಮೆಯನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಅನಾವರಣ ಮಾಡಿದರು. ಈ ವೇಳೆ ಶಾಸಕ ಡಾ. ಅಶ್ವತ್ಥ್​​ ನಾರಾಯಣ, ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಭಾಗಿ ಆಗಿದ್ದರು.

ಬೆಂಗಳೂರಿನ ಸ್ಯಾಂಕಿ ಕೆರೆ (Sankey Tank) ಮುಂದೆ ಪುನೀತ್ ರಾಜ್​ಕುಮಾರ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಅವರು 800 ಕೆಜಿ ತೂಕದ ಪ್ರತಿಮೆಯನ್ನು ಅನಾವರಣ ಮಾಡಿದರು. ಈ ವೇಳೆ ಮಲ್ಲೇಶ್ವರದ ಶಾಸಕ ಡಾ. ಅಶ್ವತ್ಥ್​​ ನಾರಾಯಣ ಮತ್ತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಅವರು ಭಾಗಿ ಆಗಿದ್ದರು. ‘ಪ್ರತಿಮೆ ಚೆನ್ನಾಗಿದೆ. ಅಭಿಮಾನಿಗಳಿಗೆ ಮತ್ತು ಅಶ್ವತ್ಥ್ ನಾರಾಯಣ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು ಅಶ್ವಿನಿ ಪುನೀತ್ ರಾಜ್​ಕುಮಾರ್. ‘ನಮ್ಮ‌ನೆಚ್ಚಿನ ನಟ ಪುನೀತ್ ರಾಜ್‍ಕುಮಾರ್ (Puneeth Rajkumar). ಅವರ ಮೆಚ್ಚಿನ ಸ್ಥಳ ಸದಾಶಿವ ನಗರ. ಇಲ್ಲಿ ಅವರ ಪ್ರತಿಮೆ ಆಗಬೇಕು ಎಂಬ ಬೇಡಿಕೆ ಇತ್ತು. ಇದಕ್ಕೆ ಸ್ಫೂರ್ತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಎಲ್ಲರ ಸಲಹೆ ಪಡೆದು ಪ್ರತಿಮೆ ಮಾಡಲಾಗಿದೆ. ಯುಗಾದಿ ಹಬ್ಬದ ಸಂಧರ್ಭದಲ್ಲಿ ಉದ್ಘಾಟನೆ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೆ, ಅಭಿಮಾನಿಗಳಿಗೆ, ಪುನೀತ್ ಕುಟುಂಬಕ್ಕೆ ಧನ್ಯವಾದಗಳು’ ಎಂದು ಅಶ್ವತ್ಥ್​​ ನಾರಾಯಣ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More