VIDEO: ಪಾಕ್​ ನಾಯಕನನ್ನು ನಿರ್ಲಕ್ಷಿಸಿ ಹೊರನಡೆದ ಸೂರ್ಯಕುಮಾರ್ ಯಾದವ್

Updated on: Sep 21, 2025 | 8:11 PM

ಸೆಪ್ಟೆಂಬರ್ 14 ರಂದು ನಡೆದ ಪಂದ್ಯದ ವೇಳೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಪಾಕ್ ನಾಯಕನೊಂದಿಗೆ ಶೇಕ್ ಹ್ಯಾಂಡ್ ಮಾಡಿರಲಿಲ್ಲ. ಅಷ್ಟೇ ಅಲ್ಲದೆ ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಆಟಗಾರರು ಕೂಡ ಪಾಕ್ ಆಟಗಾರರಿಗೆ ಹಸ್ತಲಾಘವ ನೀಡದೇ ಹೊರ ನಡೆದಿದ್ದರು.

ಏಷ್ಯಾಕಪ್​ನ 14ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಟಾಸ್ ವೇಳೆ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಅವರನ್ನು ನಿರ್ಲಕ್ಷಿಸಿದ್ದಾರೆ. ಅದು ಸಹ ಮತ್ತೊಮ್ಮೆ ಶೇಕ್ ಹ್ಯಾಂಡ್ ನೀಡದಿರುವ ಮೂಲಕ..!

ಸೆಪ್ಟೆಂಬರ್ 14 ರಂದು ನಡೆದ ಪಂದ್ಯದ ವೇಳೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಪಾಕ್ ನಾಯಕನೊಂದಿಗೆ ಶೇಕ್ ಹ್ಯಾಂಡ್ ಮಾಡಿರಲಿಲ್ಲ. ಅಷ್ಟೇ ಅಲ್ಲದೆ ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಆಟಗಾರರು ಕೂಡ ಪಾಕ್ ಆಟಗಾರರಿಗೆ ಹಸ್ತಲಾಘವ ನೀಡದೇ ಹೊರ ನಡೆದಿದ್ದರು.

ಈ ಅವಮಾನವನ್ನು ಮುಂದಿಟ್ಟು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಏಷ್ಯಾಕಪ್ ಟೂರ್ನಿಯಿಂದ ಹೊರನಡೆಯುವ ಗೊಡ್ಡು ಬೆದರಿಕೆಯೊಡ್ಡಿದ್ದರು. ಆದರೀಗ ಮತ್ತೊಮ್ಮೆ ಸೂರ್ಯಕುಮಾರ್ ಯಾದವ್ ಪಾಕಿಸ್ತಾನ್ ತಂಡದ ನಾಯಕನಿಗೆ ಶೇಕ್ ಹ್ಯಾಂಡ್ ನೀಡದೇ ಹೊರನಡೆದು ದಿಟ್ಟ ನಿಲುವು ಪ್ರದರ್ಶಿಸಿದ್ದಾರೆ.

ಶೇಕ್ ಹ್ಯಾಂಡ್ ನೀಡುತ್ತಿಲ್ಲವೇಕೆ?

ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ಪಾಕ್ ಪ್ರೇರಿತ ಉಗ್ರರು ನಡೆಸಿದ ಭಯೋತ್ಪಾದಕ ದಾಳಿಯಿಂದಾಗಿ 26 ಮಂದಿ ಸಾವನ್ನಪ್ಪಿದ್ದರು. ಈ ದಾಳಿಯನ್ನು ಖಂಡಿಸಿ ಭಾರತೀಯ ಆಟಗಾರರು ಪಾಕ್ ಆಟಗಾರರೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದಾರೆ.