ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ವಿಜೇತ ಮಹಿಳಾ ಹಾಕಿ ತಂಡಕ್ಕೆ ಪುಷ್ಪವೃಷ್ಟಿಯ ಸ್ವಾಗತ

Edited By:

Updated on: Oct 04, 2026 | 7:20 AM

44 ವರ್ಷಗಳ ನಂತರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪುಷ್ಪವೃಷ್ಟಿ ಹಾಗೂ ಡೊಳ್ಳು ಕುಣಿತದೊಂದಿಗೆ ಕ್ರೀಡಾಭಿಮಾನಿಗಳು ಭರ್ಜರಿ ಸ್ವಾಗತ ಕೋರಿದರು. ಅಭಿಮಾನಿಗಳಿಗೆ ಟೋಗ್ರಾಫ್​​ ನೀಡುವ ಮೂಲಕ ವಿಜೇತ ತಂಡದ ಸದಸ್ಯರೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ದೇವನಹಳ್ಳಿ, ಅಕ್ಟೋಬರ್​​ 04: ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ವಿಜೇತ ಮಹಿಳಾ ಹಾಕಿ ತಂಡಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಭರ್ಜರಿ ಸ್ವಾಗತ ಕೋರಲಾಗಿದೆ. 44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್​ನಲ್ಲಿ ಮಹಿಳಾ ಹಾಕಿ ತಂಡ ಚಿನ್ನ ಗೆದ್ದಿರುವ ಹಿನ್ನೆಲೆ ಪುಷ್ಪವೃಷ್ಟಿ ಮೂಲಕ ತಂಡವನ್ನು ಕ್ರೀಡಾಭಿಮಾನಿಗಳು ಸ್ವಾಗತಿಸಿದ್ದಾರೆ. ಹೂವಿನ ಮಾಲೆ ಹಾಕಿ, ಡೊಳ್ಳು ಕುಣಿತದ ಮೂಲಕ ವಿಜೇತರಿಗೆ ಶುಭಾಶಯ ತಿಳಿಸಲಾಗಿದೆ. ಅಭಿಮಾನಿಗಳಿಗೆ ಟೋಗ್ರಾಫ್​​ ನೀಡುವ ಮೂಲಕ ವಿಜೇತ ತಂಡದ ಸದಸ್ಯರೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More