AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್​​​ನ ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ ಅರಸ್​ಗೆ ಮೈಸೂರಿನಲ್ಲಿ ಅದ್ದೂರಿ ಸ್ವಾಗತ

ಏಷ್ಯನ್ ಗೇಮ್ಸ್​​​ನ ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ ಅರಸ್​ಗೆ ಮೈಸೂರಿನಲ್ಲಿ ಅದ್ದೂರಿ ಸ್ವಾಗತ

ರಾಮ್​, ಮೈಸೂರು
| Edited By: |

Updated on:Oct 07, 2026 | 12:54 PM

Share

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಮೈಸೂರಿನ ಪ್ರಣವಿ ಅರಸ್​ಗೆ ತವರಿಗೆ ಭವ್ಯ ಸ್ವಾಗತ ನೀಡಲಾಯಿತು. ನಗರದಾದ್ಯಂತ ತೆರೆದ ವಾಹನದಲ್ಲಿ ಸಂಚರಿಸಿದ 'ಚಿನ್ನ'ದ ಹುಡುಗಿಯನ್ನು ನೋಡಲು ಜನಸಾಗರವೇ ಹರಿದುಬಂದಿತ್ತು. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಡೆದ ಸನ್ಮಾನದಲ್ಲಿ ಡೋಲು, ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು.

ಮೈಸೂರು, ಅಕ್ಟೋಬರ್​​ 07: ಏಷ್ಯನ್ ಗೇಮ್ಸ್​​​ನ ಗಾಲ್ಫ್‌ನಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಮೈಸೂರಿನ ಹೆಮ್ಮೆಯ ಕ್ರೀಡಾಪಟು ಪ್ರಣವಿ ಅರಸ್ ಅವರಿಗೆ ತವರಿಗೆ ಅದ್ದೂರಿ ಸ್ವಾಗತ ದೊರೆತಿದೆ. ತಮ್ಮ ಸಾಧನೆಯ ಬಳಿಕ ತಾಯ್ನಾಡಿಗೆ ಮರಳಿದ ಪ್ರಣವಿ ಎಸ್. ಅರಸ್ ಅವರನ್ನು ಮೈಸೂರಿನ ಜನತೆ ಆಪ್ತವಾಗಿ ಬರಮಾಡಿಕೊಂಡಿದ್ದಾರೆ. ಮೈಸೂರು ನಗರದಾದ್ಯಂತ ತೆರೆದ ವಾಹನದಲ್ಲಿ ಪ್ರಣವಿ ಅರಸ್ ಮೆರವಣಿಗೆ ನಡೆಸಲಾಗಿದ್ದು, ರಸ್ತೆಯ ಇಕ್ಕೆಲಗಳಲ್ಲಿ ನಿಂತು ಅಭಿಮಾನಿಗಳು ಅವರಿಗೆ ಶುಭಾಶಯಕೋರಿದ್ದಾರೆ. ಮೈಸೂರು ನಗರದ ಕೋಟೆ ಅಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಪ್ರಣವಿ ಅರಸ್ ಅವರನ್ನು ಸನ್ಮಾನಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 07, 2026 12:52 PM

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More