ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಕೇಂದ್ರದ ವಿರುದ್ಧ ಸಚಿವ ಎಂಬಿ ಪಾಟೀಲ್​ ಕಿಡಿ

Edited By:

Updated on: Nov 08, 2026 | 5:15 PM

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಉತ್ಪಾದನೆ ಆಗುತ್ತಿರುವ ಪೈಕಿ ಶೇ.40ರಷ್ಟು ಖರೀದಿಸುತ್ತಿಲ್ಲ
  • ಕಳೆದ 9 ವರ್ಷಗಳಿಂದ ಎಂಎಸ್‌ಪಿ ದರ ಹೆಚ್ಚಳ ಮಾಡಿಲ್ಲ
  • ಕೇಂದ್ರ ಸರ್ಕಾರದವರೇ ಇದೆಲ್ಲಾ ಮಾಡಿ ಗಬ್ಬು ಎಬ್ಬಿಸಿದ್ದಾರೆ

ಕೇಂದ್ರ ಸರ್ಕಾರದ ಎಥೆನಾಲ್ ನೀತಿಯು ರೈತರು ಮತ್ತು ಸಕ್ಕರೆ ಕಾರ್ಖಾನೆಗಳಿಗೆ ಸಂಕಷ್ಟ ತಂದಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ. ಎಥೆನಾಲ್ ಉತ್ಪಾದನೆಗೆ ಉತ್ತೇಜನ ನೀಡಿದ್ದ ಕೇಂದ್ರವು, ಈಗ ಖರೀದಿಗೆ ಹಿಂದೇಟು ಹಾಕುತ್ತಿದೆ. ಎಂಎಸ್‌ಪಿ ಹೆಚ್ಚಿಸದೆ ಇರುವುದು ಮತ್ತು ಎಫ್‌ಆರ್‌ಪಿ ಗೊಂದಲಗಳೂ ಸಮಸ್ಯೆಗಳಾಗಿವೆ. ಈ ಕುರಿತು ತನಿಖೆ ನಡೆಸುವಂತೆ ಅವರು ಆಗ್ರಹಿಸಿದ್ದಾರೆ.

ಬೆಂಗಳೂರು, ನವೆಂಬರ್​ 08: ‘ಎಥೆನಾಲ್ ಉತ್ಪಾದನೆಗೆ ಕೇಂದ್ರ ಸರ್ಕಾರ ಭಾರಿ ಉತ್ತೇಜನ ನೀಡಿತ್ತು. ಇದನ್ನ ನಂಬಿ ಹಲವು ಸಕ್ಕರೆ ಕಾರ್ಖಾನೆಗಳು ಎಥೆನಾಲ್ ತಯಾರಿಕೆಯನ್ನು ಪ್ರಾರಂಭಿಸಿದವು. ಆದರೆ ಇದೀಗ ಕೇಂದ್ರ ಸರ್ಕಾರ ಉತ್ಪಾದಿಸಿದ ಎಥೆನಾಲ್ ಅನ್ನು ಖರೀದಿಸುತ್ತಿಲ್ಲ. ಕರ್ನಾಟಕದಲ್ಲಿ ಉತ್ಪಾದನೆಯಾಗುವ ಎಥೆನಾಲ್‌ನ ಶೇ 40ರಷ್ಟು ಕೂಡ ಖರೀದಿ ಆಗುತ್ತಿಲ್ಲ, ಕೇವಲ ಶೇ 20ರಿಂದ 30ರಷ್ಟು ಮಾತ್ರ ಖರೀದಿ ಮಾಡಲಾಗುತ್ತಿದೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಎಲ್ಲರಿಗೂ ಎಥೆನಾಲ್ ಉತ್ಪಾದಿಸಿ ಅಂದರು, ಆದರೆ ಈಗ ಖರೀದಿಸುತ್ತಿಲ್ಲ. ಕೇಂದ್ರ ಸರ್ಕಾರದವರು ಮಾಡಿದ ತಪ್ಪನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಎಲ್ಲ ಆರೋಪಗಳನ್ನು ತಿರಸ್ಕರಿಸಿದ್ದಾರೆ, ಎಲ್ಲದರ ಬಗ್ಗೆ ತನಿಖೆ ಆಗಲಿ. ರಾಜ್ಯ ಕಾಂಗ್ರೆಸ್‌ ಸರ್ಕಾರ ಕೂಡ ಇದರ ಬಗ್ಗೆ ತೀರ್ಮಾನ ಮಾಡುತ್ತದೆ. ಮುಂದೆ ಏನು ಮಾಡಬೇಕೆಂದು ಸಿಎಂ ಹಾಗೂ ಆಹಾರ ಸಚಿವರು ನಿರ್ಧರಿಸುತ್ತಾರೆ’ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More