ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ಸರ್ಕಾರ ಅಡ್ಡಿಯುಂಟು ಮಾಡುತ್ತಿದೆ: ಸಿದ್ದರಾಮಯ್ಯ

|

Updated on: Jan 25, 2024 | 11:41 AM

ರಾಹುಲ್ ಕೈಗೊಂಡಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ತಡೆಯಬೇಕು ಅದಕ್ಕೆ ಅಡ್ಡಿಯನ್ನುಂಟು ಮಾಡಬೇಕು ಎಂಬ ದುರುದ್ದೇಶದಿಂದ ಅಲ್ಲಿನ ಸರ್ಕಾರ ಇಂಥ ಕೆಲಸಗಳನ್ನು ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು. ಆದರೆ ರಾಹುಲ್ ಗಾಂಧಿ ಇದನ್ನೆಲ್ಲ ಕೇರ್ ಮಾಡಲ್ಲ, ಅಸ್ಸಾಂ ಸರ್ಕಾರದ ಕ್ರಮ ತಿರುಗುಬಾಣವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರು: ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭಾರತ್ ಜೋಡೋ ನ್ಯಾಯ ಯಾತ್ರೆ (Bharat Jodu Nyay Yatra) ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಸರ್ಕಾರ (Assam government) ಎಫ್ಐಅರ್ ದಾಖಲಿಸಿ ಅವರ ಯಾತ್ರೆಗೆ ಅಡಚಣೆ ಉಂಟು ಮಾಡುತ್ತಿದೆ ಅಂತ ಖಂಡಿಸಿದರು. ವ್ಯಕ್ತಿಯೊಬ್ಬ ತಪ್ಪು ಮಾಡಿದಾಗ, ಭಾರತೀಯ ನ್ಯಾಯ ಸಂಹಿತೆಯನ್ನು ಉಲ್ಲಂಘಿಸಿದಾಗ ಅಥವಾ ಭಾರತದ ಸಂವಿಧಾನವನ್ನು ಉಲ್ಲಂಘಿಸಿದಾಗ ಎಫ್ಐಅರ್ ದಾಖಲಿಸುತ್ತಾರೆ ಎಂದು ಹೇಳಿದ ಸಿದ್ದರಾಮಯ್ಯ, ಯಾವುದೇ ಪ್ರಮಾದವೆಸಗದ ರಾಹುಲ್ ಗಾಂಧಿಯವರ ವಿರುದ್ಧ ಅಸ್ಸಾಂ ಸರ್ಕಾರ ವಿನಾಕಾರಣ ಮತ್ತು ಉದ್ದೇಶಪೂರ್ವಕವಾಗಿ ಎಫ್ಐಅರ್ ದಾಖಲಿಸಿದೆ ಎಂದರು. ರಾಹುಲ್ ಕೈಗೊಂಡಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ತಡೆಯಬೇಕು ಅದಕ್ಕೆ ಅಡ್ಡಿಯನ್ನುಂಟು ಮಾಡಬೇಕು ಎಂಬ ದುರುದ್ದೇಶದಿಂದ ಅಲ್ಲಿನ ಸರ್ಕಾರ ಇಂಥ ಕೆಲಸಗಳನ್ನು ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು. ಆದರೆ ರಾಹುಲ್ ಗಾಂಧಿ ಇದನ್ನೆಲ್ಲ ಕೇರ್ ಮಾಡಲ್ಲ, ಅಸ್ಸಾಂ ಸರ್ಕಾರದ ಕ್ರಮ ತಿರುಗುಬಾಣವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on