ಅಸ್ಸಾಂನಲ್ಲಿ ಇಂದು ಅಭಿವೃದ್ಧಿಯ ಹಬ್ಬ: ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

Updated on: Feb 14, 2026 | 10:31 AM

ಅಸ್ಸಾಂ ರಾಜ್ಯವು ಈಶಾನ್ಯ ಭಾರತದ ಪ್ರವೇಶ ದ್ವಾರವಾಗಿದ್ದು, ಇಂದು ಸಂಪರ್ಕ, ಇಂಧನ ಮತ್ತು ಕ್ರೀಡಾ ಮೂಲಸೌಕರ್ಯ ಸುಧಾರಿಸಲು ಸಾವಿರಾರು ಕೋಟಿ ರೂ. ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ರೈಲ್ವೆ ವಿದ್ಯುದೀಕರಣ, ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯಿಂದ ಪ್ರಯಾಣ ಸಮಯ ಕಡಿಮೆಯಾಗಲಿದ್ದು, ಹೊಸ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಅಂತರಾಷ್ಟ್ರೀಯ ಕ್ರೀಡಾ ಸೌಲಭ್ಯಗಳು ಅಸ್ಸಾಂನ ಸಮಗ್ರ ಅಭಿವೃದ್ಧಿಗೆ ವೇಗ ನೀಡಲಿವೆ.

ಗುವಾಹಟಿ, ಫೆ.14: ಈಶಾನ್ಯ ಭಾರತದ ಪ್ರವೇಶ ದ್ವಾರವೆಂದೇ ಕರೆಯಲ್ಪಡುವ ಅಸ್ಸಾಂ ರಾಜ್ಯದಲ್ಲಿ (Assam Infrastructure projects) ಇಂದು ಅಭಿವೃದ್ಧಿಯ ಹಬ್ಬ. ಅಸ್ಸಾಂನ ಸಂಪರ್ಕ ವ್ಯವಸ್ಥೆ, ಇಂಧನ ಮತ್ತು ಕ್ರೀಡಾ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳಿಗೆ ಇಂದು ಚಾಲನೆ ಸಿಗಲಿದೆ. ಅಸ್ಸಾಂನ ರೈಲ್ವೇ ಮಾರ್ಗಗಳ ವಿದ್ಯುದ್ದೀಕರಣ ಮತ್ತು ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣಾ ಯೋಜನೆಗಳಿಗೆ ಪ್ರಧಾನಿ ಮೋದಿ ಅವರು ಚಾಲನೆ ನೀಡಲಿದ್ದಾರೆ. ಇದು ಈಶಾನ್ಯ ರಾಜ್ಯಗಳ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಉನ್ನತ ಮಟ್ಟದ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಹೊಸ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ಉದ್ಘಾಟನೆ ನಡೆಯಲಿದೆ. ಯುವಜನತೆಯನ್ನು ಉತ್ತೇಜಿಸಲು ಅಂತರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲಸೌಕರ್ಯಗಳಿಗೆ ಶಂಕುಸ್ಥಾಪನೆ ನೆರವೇರಲಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More