ಬೆಂಗಳೂರು: ಎಸ್ಎಸ್ಎಲ್ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರಿನ ಚಂದ್ರಲೇಔಟ್ನಲ್ಲಿ ಎಸ್ಎಸ್ಎಲ್ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಕಟ್ಟಿಗೆಗಳಿಂದ ಹಲ್ಲೆ ನಡೆದಿದೆ. ಮಾರ್ಚ್ 17ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕರ ಕೈ ಮತ್ತು ಕುತ್ತಿಗೆಗೆ ಗಾಯಗಳಾಗಿವೆ. ಪೋಷಕರ ದೂರಿನ ಮೇರೆಗೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು, ಮಾರ್ಚ್ 24: ಎಸ್ಎಸ್ಎಲ್ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಕಟ್ಟಿಗೆಗಳಿಂದ ಮನಸೋಇಚ್ಛೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಚಂದ್ರಾಲೇಔಟ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್17ರ ರಾತ್ರಿ ಘಟನೆ ನಡೆದಿದೆ. ಹಲ್ಲೆಗೊಳಗಾದ ಬಾಲಕರ ಕೈ, ಕುತ್ತಿಗೆ ಭಾಗದಲ್ಲಿ ಗಾಯವಾಗಿದೆ. ಗಾಯಗೊಂಡ ಬಾಲಕರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಮೇಲಿನ ಹಲ್ಲೆ ಬಗ್ಗೆ ಪೋಷಕರು ಚಂದ್ರಾಲೇಟ್ ಠಾಣೆಯಲ್ಲಿ ದೂರು ನೀಡಿದ್ದು, ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Latest Videos