ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ

Edited By:

Updated on: Dec 19, 2025 | 11:56 AM

ಮನೆಮುಂದೆ ತನ್ನ ಪಾಡಿಗೆ ತಾನು ಆಟವಾಡಿಕೊಂಡಿದ್ದ ಬಾಲಕನ ಮೇಲೆ ದುಷ್ಟನೊಬ್ಬ ವಿಕೃತಿ ಮೆರೆದಿದ್ದಾನೆ. ಹಿಂಬದಿಯಿಂದ ಬಂದು ಬಾಲಕನ ಬೆನ್ನಿಗೆ ಬಿದ್ದ ಕಾರಣ, ಆತ ಮುಗ್ಗರಿಸಿ ಬಿದ್ದಿದ್ದಾನೆ. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆ ಸಂಬಂಧ ಬಾಲಕನ ತಾಯಿ ದೂರಿನ ಅನ್​ವಯ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು, ಡಿಸೆಂಬರ್​​ 19: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನಿಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಜಾಡಿಸಿ ಒದ್ದ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಡಿ.14ರಂದು ನಡೆದಿದೆ. ಅಜ್ಜಿ ಮನೆಗೆ ಬಂದಿದ್ದ ಬಾಲಕ ನೀವ್ ಜೈನ್​​ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ. ಈ ವೇಳೆ ಬಂದ ರಂಜನ್​​ ಜಾಡಿಸಿ ಒದ್ದಿದ್ದರಿಂದ ಬಾಲಕ ಮುಗ್ಗರಿಸಿ ಬಿದ್ದಿದ್ದಾನೆ. ಫುಟ್ಬಾಲ್​​ ರೀತಿ ರಂಜನ್​​ ಒದ್ದಿದ್ದ ಕಾರಣ ಬಾಲಕನಿಗೆ ತರಚಿದ ಗಾಯಗಳಾಗಿವೆ. ಬಾಲಕನನ್ನು ರಂಜನ್ ಒದೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿ ವಿರುದ್ಧ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ರಂಜನ್​​ನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 19, 2025 11:54 AM
Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More