ಮನೆ ಭೋಗ್ಯ ಸಂಬಂಧ ಇಬ್ಬರ ನಡುವೆ ಗಲಾಟೆ, ಸಾಕ್ಷಿಯಾಗಿದ್ದಕ್ಕೆ ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ವಿಚಾರವಾಗಿ ಇಬ್ಬರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಾಕ್ಷಿಯಾದ ಕಾರಣ ಮಹಿಳೆ ಮತ್ತು ಆಕೆಯ ಪುತ್ರಿ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಮನೆ ಭೋಗ್ಯಕ್ಕೆ ಪಡೆದಿದ್ದ ಮಹಿಳೆ ಮೇಲಿಯೂ ದಾಳಿ ನಡೆಸಲಾಗಿದ್ದು, ಗಾಯಾಳುಗಳನ್ನ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮೂವರು ಯುವಕರು ದಾಳಿ ನಡೆಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಿಕ್ಕಮಗಳೂರು, ಡಿಸೆಂಬರ್ 16: ಮನೆ ಭೋಗ್ಯ ಸಂಬಂಧ ಇಬ್ಬರ ನಡುವೆ ನಡೆದ ಗಲಾಟೆಗೆ ಸಾಕ್ಷಿಯಾಗಿದ್ದಕ್ಕೆ ಮಹಿಳೆ ಮತ್ತು ಆಕೆಯ ಪುತ್ರಿ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ಸಮೀಪದ ಬೀಜುವಳ್ಳಿಯಲ್ಲಿ ನಡೆದಿದೆ. ಆರೋಪಿ ಅರುಣ್ ಎಂಬಾತ ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಬೀನ ಎಂಬುವವರು ಅರುಣ್ ತಾಯಿಯಿಂದ ಮನೆ ಭೋಗ್ಯಕ್ಕೆ ಪಡೆದಿದ್ದರು. ಈ ಸಂಬಂಧ ಹಣದ ವಿಚಾರವಾಗಿ ಸಬೀನ ಮತ್ತು ಅರುಣ್ ನಡುವೆ ನಿತ್ಯವೂ ಗಲಾಟೆ ನಡೆಯುತ್ತಿತ್ತು. ಈ ಕುರಿತ ಪ್ರಕರಣ ಸಂಬಂಧ ಸಾಕ್ಷಿಯಾಗಿ ಬೇಬಿ ಮತ್ತು ಆಕೆಯ ಪುತ್ರಿ ಸಹಿ ಮಾಡಿದ್ದರು. ಸಬೀನ ಅವರ ಮನೆ ಪಕ್ಕವೇ ಇವರೂ ವಾಸವಿದ್ದು, ಮನೆಯ ಮುಂದೆ ನಿಂತಿದ್ದ ಯುವತಿಯನ್ನ ಎಳೆದು ಚರಂಡಿಗೆ ಹಾಕಿರುವ ಅರುಣ್, ಅಟ್ಟಾಡಿಸಿ ಹೊಡೆದಿದ್ದಾನೆ. ಸಬೀನಾ ಅವರ ಮೇಲೂ ಹಲ್ಲೆ ನಡೆದಿದ್ದು, ಒಟ್ಟು ಮೂವರು ಯುವಕರು ದಾಳಿ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಗಾಯಗೊಂಡ ಮಹಿಳೆಯರನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.