ವಿಧಾನ ಸೌಧ ಒಂದು ದೇವಾಲಯ; ಅದರೊಳಗೆ ಪ್ರವೇಶಿಸಿ ಜನಸೇವೆ ಮಾಡಲು ಪುಣ್ಯ ಮಾಡಿರಬೇಕು: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Feb 24, 2023 | 5:37 PM

ಚುನಾವಣಾ ರಾಜಕೀಯ ದೂರವಾಗುತ್ತಿದ್ದರೂ ಪಕ್ಷ ಸಂಘಟನೆ ತಮ್ಮನ್ನು ತೊಡಗಿಸಿಕೊಂಡು ರಾಜ್ಯದ ಉದ್ದಗಲಕ್ಕೆ ಪ್ರವಾಸ ಮಾಡುತ್ತಾ ಬಿಜೆಪಿಯನ್ನು ಪುನಃ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಯಡಿಯೂರಪ್ಪ ಹೇಳಿದರು.

ಬೆಂಗಳೂರು: 1983ರಿಂದ ಇಲ್ಲಿಯವರೆಗೆ ವಿಧಾನ ಸಭೆಯ ಅವಿಭಾಜ್ಯ ಅಂಗವಾಗಿದ್ದ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಇನ್ನು ಏನಿದ್ದರೂ ಸದಸದ ಹೊರಗಿನಿಂದಲೇ ಪಕ್ಷಕ್ಕಾಗಿ ಕೆಲಸ ಮಾಡಲಿದ್ದಾರೆ. ವಿಧಾನ ಸಭೆಯೊಂದಿಗೆ ನಾಲ್ಕ ದಶಕಗಳ ಒಡನಾಟದ ಬಗ್ಗೆ ಟಿವಿ9 ಪ್ರತಿನಿಧಿಯೊಂದಿಗೆ ಮಾತಾಡಿದ ಅವರು, ವಿಧಾನ ಮಂಡಲ ಒಂದು ದೇವಾಲಯವಿದ್ದ (temple) ಹಾಗೆ, ಅದರೊಳಗೆ ಕೂತು ಜನರಿಗಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ಪೂರ್ವಜನ್ಮದ ಪುಣ್ಯ ಎಂದು ಅವರು ಹೇಳಿದರು. ತಾವೀಗ ಚುನಾವಣಾ ರಾಜಕೀಯ (electoral politics) ದೂರವಾಗುತ್ತಿದ್ದರೂ ಪಕ್ಷ ಸಂಘಟನೆ ತಮ್ಮನ್ನು ತೊಡಗಿಸಿಕೊಂಡು ರಾಜ್ಯದ ಉದ್ದಗಲಕ್ಕೆ ಪ್ರವಾಸ ಮಾಡುತ್ತಾ ಬಿಜೆಪಿಯನ್ನು ಪುನಃ ಅಧಿಕಾರಕ್ಕೆ ತರಲು ಹರಲಿರುಳು ಶ್ರಮಿಸುವುದಾಗಿ ಯಡಿಯೂರಪ್ಪ ಹೇಳಿದರು. ಪಕ್ಷ ಒಪ್ಪಿದಲ್ಲಿ ಬಿವೈ ವಿಜಯೇಂದ್ರ ತಮ್ಮ ಉತ್ತರಾಧಿಕಾರಿಯಾಗುವ ಸುಳಿವನ್ನು ಅವರು ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.