AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಜನ್ಮಾಷ್ಟಮಿ: ಉಡುಪಿ ಕೃಷ್ಣಮಠಕ್ಕೆ ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್

ಕೃಷ್ಣ ಜನ್ಮಾಷ್ಟಮಿ: ಉಡುಪಿ ಕೃಷ್ಣಮಠಕ್ಕೆ ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್

ಅರುಣ್​ ಕುಮಾರ್​ ಬೆಳ್ಳಿ
|

Updated on:Sep 07, 2023 | 11:00 AM

Share

ಜನ್ಮಾಷ್ಟಮಿಯ ಪವಿತ್ರವಾದ ದಿನವಾದ ಇಂದು ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದಿದ್ದು ಧನ್ಯತೆಯ ಭಾವ ಮೂಡಿಸಿದೆ. ನಾಡಿನ ಜನರೆಲ್ಲ ಪ್ರೀತಿ-ವಿಶ್ವಾಸಗಳೊಂದಿಗೆ ನೆಮ್ಮದಿಯಿಂದ ಬದುಕುವ ಶಕ್ತಿಯನ್ನು ಕೃಷ್ಣ ಪರಮಾತ್ಮ ದಯಪಾಲಿಸಲಿ, ಕರ್ನಾಟಕ ಹೆಚ್ಚೆಚ್ಚು ಅಭಿವೃದ್ಧಿ ಹೊಂದಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಪೂರಕವಾಗಲಿ ಎಂದು ಕೃಷ್ಣನನ್ನು ಪ್ರಾರ್ಥಿಸಿದ್ದಾಗಿ ಹೇಳಿದರು.

ಉಡುಪಿ: ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ವಿಧಾನ ಸಭಾ ಸ್ಪೀಕರ್ ಯುಟಿ ಖಾದರ್ (Assembly speaker UT Khader) ನಗರದ ವಿಖ್ಯಾತ ಕೃಷ್ಣ ಮಠಕ್ಕೆ (Udupi krishna Mutt) ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು. ನಂತರ ಟಿವಿ9 ಕನ್ನಡ ವಾಹಿನಿಯ ಉಡುಪಿ ಪ್ರತಿನಿಧಿಯೊಂದಿಗೆ ಮಾತಾಡಿದ ಅವರು, ನಾಡಿನ ಜನತೆಗೆ ಜನ್ಮಾಷ್ಟಮಿಯ ಶುಭಾಷಯಗಳನ್ನು ತಿಳಿಸಿದರು. ಮುಂದುವರಿದು ಮಾತಾಡಿದ ಖಾದರ್ ಜನ್ಮಾಷ್ಟಮಿಯ ಪವಿತ್ರವಾದ ದಿನವಾದ ಇಂದು ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದಿದ್ದು ಧನ್ಯತೆಯ ಭಾವ ಮೂಡಿಸಿದೆ. ನಾಡಿನ ಜನರೆಲ್ಲ ಪ್ರೀತಿ-ವಿಶ್ವಾಸಗಳೊಂದಿಗೆ ನೆಮ್ಮದಿಯಿಂದ ಬದುಕುವ ಶಕ್ತಿಯನ್ನು ಕೃಷ್ಣ ಪರಮಾತ್ಮ ದಯಪಾಲಿಸಿಸಲಿ, ಕರ್ನಾಟಕ (Karnataka) ಹೆಚ್ಚೆಚ್ಚು ಅಭಿವೃದ್ಧಿ ಹೊಂದಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಪೂರಕವಾಗಲಿ ಎಂದು ಕೃಷ್ಣನನ್ನು ಪ್ರಾರ್ಥಿಸಿದ್ದಾಗಿ ಹೇಳಿದರು. ಖಾದರ್ ಅವರೊಂದಿಗೆ ಕೆಲ ಸ್ಥಳೀಯ ನಾಯಕರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 07, 2023 10:58 AM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More