ಕೊಲ್ಲೂರು ಮೂಕಾಂಬಿಕೆಗೆ ಸಿಎಂ ವಿಜಯ್, ವಿಶೇಷ ಪೂಜೆ: ಕ್ಷೇತ್ರದ ಮಹಿಮೆ, ದೇವಿ ಶಕ್ತಿ ಬಗ್ಗೆ ವಿವರಿಸಿದ ಆಧ್ಯಾತ್ಮಕ ಚಿಂತಕ

Updated on: Jun 12, 2026 | 5:11 PM

ತಮಿಳುನಾಡು ಸಿಎಂ ಆದ ಬಳಿಕ ವಿಜಯ್ ಅವರು ಮೊದಲ ಬಾರಿಗೆ​​ ಇಂದು (ಜೂನ್ 12) ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಪ್ರಧಾನ ಅರ್ಚಕ ರಾಮಚಂದ್ರ ಅಡಿಗರು ಪೂಜೆಗೆ ಸಂಕಲ್ಪ ನೆರವೇರಿಸಿದ್ದು, ದೇವಸ್ಥಾನದ ಅರ್ಚಕರು ಸಿಎಂ ವಿಜಯ್ ಕೈಗೆ ರಕ್ಷಾ ದಾರ ಕಟ್ಟಿದರು. ಇನ್ನು 30 ನಿಮಿಷಗಳ ಕಾಲ ದೇವಸ್ಥಾನದಲ್ಲಿದ್ದ ವಿಜಯ್, ಅವರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿ ತೆರಳಿದ್ದಾರೆ.

ಉಡುಪಿ, (ಜೂನ್​​ 12): ತಮಿಳುನಾಡು ಸಿಎಂ ಆದ ಬಳಿಕ ವಿಜಯ್ ಅವರು ಮೊದಲ ಬಾರಿಗೆ​​ ಇಂದು (ಜೂನ್ 12) ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಪ್ರಧಾನ ಅರ್ಚಕ ರಾಮಚಂದ್ರ ಅಡಿಗರು ಪೂಜೆಗೆ ಸಂಕಲ್ಪ ನೆರವೇರಿಸಿದ್ದು, ದೇವಸ್ಥಾನದ ಅರ್ಚಕರು ಸಿಎಂ ವಿಜಯ್ ಕೈಗೆ ರಕ್ಷಾ ದಾರ ಕಟ್ಟಿದರು. ಇನ್ನು 30 ನಿಮಿಷಗಳ ಕಾಲ ದೇವಸ್ಥಾನದಲ್ಲಿದ್ದ ವಿಜಯ್, ಅವರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿ ತೆರಳಿದ್ದಾರೆ. ಇನ್ನು ವಿಜಯ್ ಅವರ ಪೂಜೆ ಬಗ್ಗೆ ಆಧ್ಯಾತ್ಮಕ ಚಿಂತಕ ಪ್ರಕಾಶ್ ಅಮ್ಮಣ್ಣಾಯ ಟಿವಿ9 ಜೊತೆ ಮಾತನಾಡಿದ್ದು, ವಿಜಯ್ ಅವರ ಪೂಜೆ ಹಾಗೂ ಮೂಕಾಂಬಿಕಾ ದೇವಿಯ ವಿಶೇಷತೆಯನ್ನು ವಿವರಿಸಿದ್ದಾರೆ.

ಇದನ್ನೂ ನೋಡಿ: ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ತಮಿಳುನಾಡು ಸಿಎಂ ವಿಜಯ್​​

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More