ಗಗನಯಾತ್ರಿ ಶುಭಾಂಶು ಶುಕ್ಲಾಗೆ ಬೆಂಗಳೂರಿನ ನಂಟಿದೆ: ವಿಜ್ಞಾನಿ ಗುರುಪ್ರಸಾದ್
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ಮೂವರು ಸಿಬ್ಬಂದಿಯ ಹೊತ್ತ ಸ್ಪೇಸ್-ಎಕ್ಸ್ನ ಫಾಲ್ಕನ್ 9 ರಾಕೆಟ್ ಯಶಸ್ವಿ ಉಡಾವಣೆ ಆಗಿದೆ. ಶುಭಾಂಶು ಶುಕ್ಲಾ ಬೆಂಗಳೂರಿನ ಐಐಎಸ್ಸಿಯಲ್ಲಿ ತರಬೇತಿ ಪಡೆದಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಬೆಂಗಳೂರಿನ ನೆಹರೂ ತಾರಾಲಯ ನಿರ್ದೇಶಕ ಗುರುಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರು, ಜೂನ್ 25: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಸೇರಿ ಮೂವರು ಸಿಬ್ಬಂದಿಯ ಹೊತ್ತ ಸ್ಪೇಸ್-ಎಕ್ಸ್ನ ಫಾಲ್ಕನ್ 9 ರಾಕೆಟ್ ಯಶಸ್ವಿ ಉಡಾವಣೆ ಆಗಿದೆ. ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಬೆಂಗಳೂರಿನ ನಂಟು ಹೊಂದಿದ್ದಾರೆ. ಈ ಬಗ್ಗೆ ನೆಹರೂ ತಾರಾಲಯ ನಿರ್ದೇಶಕ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಟಿವಿ9 ಜೊತೆ ಮಾತನಾಡಿದ ಅವರು, ಶುಭಾಂಶು ಶುಕ್ಲಾ ಬೆಂಗಳೂರಿನ ಐಐಎಸ್ಸಿ ಯಲ್ಲಿ ತರಬೇತಿ ಪಡೆದಿದ್ದಾರೆ. ಶುಭಾಂಶು ಶುಕ್ಲಾ ಅವರು 60 ಯೋಜನೆಗಳಲ್ಲಿ ಕಾರ್ಯವನ್ನ ನಿರ್ವಹಿಸುತ್ತಿದ್ದಾರೆ. ಈ ಜರ್ನಿಯಿಂದ ಭಾರತಕ್ಕೂ ಕೂಡ ಅನೇಕ ಉಪಯೋಗ ಆಗಲಿದೆ ಎಂದಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos