ಗಗನಯಾತ್ರಿ ಶುಭಾಂಶು ಶುಕ್ಲಾಗೆ ಬೆಂಗಳೂರಿನ ನಂಟಿದೆ: ವಿಜ್ಞಾನಿ ಗುರುಪ್ರಸಾದ್

Edited By:

Updated on: Jun 25, 2025 | 1:53 PM

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ಮೂವರು ಸಿಬ್ಬಂದಿಯ ಹೊತ್ತ  ಸ್ಪೇಸ್​-ಎಕ್ಸ್​​ನ ಫಾಲ್ಕನ್​ 9 ರಾಕೆಟ್ ಯಶಸ್ವಿ ಉಡಾವಣೆ ಆಗಿದೆ. ಶುಭಾಂಶು ಶುಕ್ಲಾ ಬೆಂಗಳೂರಿನ ಐಐಎಸ್​ಸಿಯಲ್ಲಿ ತರಬೇತಿ ಪಡೆದಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಬೆಂಗಳೂರಿನ ನೆಹರೂ ತಾರಾಲಯ ನಿರ್ದೇಶಕ ಗುರುಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಜೂನ್​ 25: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಸೇರಿ ಮೂವರು ಸಿಬ್ಬಂದಿಯ ಹೊತ್ತ  ಸ್ಪೇಸ್​-ಎಕ್ಸ್​​ನ ಫಾಲ್ಕನ್​ 9 ರಾಕೆಟ್ ಯಶಸ್ವಿ ಉಡಾವಣೆ ಆಗಿದೆ. ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಬೆಂಗಳೂರಿನ ನಂಟು ಹೊಂದಿದ್ದಾರೆ. ಈ ಬಗ್ಗೆ ನೆಹರೂ ತಾರಾಲಯ ನಿರ್ದೇಶಕ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಟಿವಿ9 ಜೊತೆ ಮಾತನಾಡಿದ ಅವರು, ಶುಭಾಂಶು ಶುಕ್ಲಾ ಬೆಂಗಳೂರಿನ ಐಐಎಸ್​ಸಿ ಯಲ್ಲಿ ತರಬೇತಿ ಪಡೆದಿದ್ದಾರೆ. ಶುಭಾಂಶು ಶುಕ್ಲಾ ಅವರು 60 ಯೋಜನೆಗಳಲ್ಲಿ ಕಾರ್ಯವನ್ನ ನಿರ್ವಹಿಸುತ್ತಿದ್ದಾರೆ. ಈ ಜರ್ನಿಯಿಂದ ಭಾರತಕ್ಕೂ ಕೂಡ ಅನೇಕ ಉಪಯೋಗ ಆಗಲಿದೆ ಎಂದಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More