Laxman Savadi: ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಕಾರು ಅಪಘಾತ, ವಿಡಿಯೋ ನೋಡಿ
Laxman Savadi: ಮಾಜಿ ಉಪಮುಖ್ಯಮಂತ್ರಿ, ಕಾಂಗ್ರೆಸ್ ಹಾಲಿ ಶಾಸಕ ಲಕ್ಷ್ಮಣ್ ಸವದಿ ಅವರು ಕಾರು ಅಪಘಾತಕ್ಕೀಡಾಗಿದೆ. ಗೋಕಾಕ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಪಿಕಪ್ ವಾಹನ ಶಾಸಕ ಲಕ್ಷ್ಮಣ್ ಸವದಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶಾಸಕರ ಕಾರಿನ ಮುಂಭಾಗದಲ್ಲಿ ಜಖಂ ಆಗಿದೆ.
ಬೆಳಗಾವಿ, (ಜೂನ್ 09): ಮಾಜಿ ಡಿಸಿಎಂ, ಅಥಣಿ ಕಾಂಗ್ರೆಸ್ ಹಾಲಿ ಶಾಸಕ ಲಕ್ಷ್ಮಣ್ ಸವದಿ Laxman Savadi) ತೆರಳುತ್ತಿದ್ದ ಕಾರು ಇಂದು (ಜೂನ್ 09) ಅಪಘಾತಕ್ಕೀಡಾಗಿದೆ. ಅಥಣಿಯಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರು ಗ್ರಾಮದ ಬಳಿ ಪಿಕಪ್ ವಾಹನ ವಾಹನ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಲಕ್ಷ್ಮಣ್ ಸವದಿ ಕಾರಿನ ಮುಂಭಾಗ ಜಖಂ ಆಗಿದೆ. ಇನ್ನು ಅಪಘಾತದಲ್ಲಿ ಲಕ್ಷ್ಮಣ್ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Published on: Jun 09, 2025 07:47 PM