ಅಥಣಿ: ರಸ್ತೆಯಲ್ಲೇ ಉರುಳು ಸೇವೆ ಮಾಡಿ ರೈತರಿಂದ ವಿಭಿನ್ನ ಪ್ರತಿಭಟನೆ
ಕಬ್ಬು ಬೆಳೆಗೆ ಬೆಲೆ ನಿಗದಿ ವಿಚಾರವಾಗಿ ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಯುತ್ತಿದೆ. ಮತ್ತೊಂದೆಡೆ, ಪಟ್ಟು ಸಡಿಲಿಸದ ರೈತರು ಹೋರಾಟ ತೀವ್ರಗೊಳಿಸಿದ್ದಾರೆ. ಇದೀಗ ಕಬ್ಬು ಬೆಳೆಗಾರರು ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ರಸ್ತೆಯಲ್ಲೇ ಉರುಳುಸೇವೆ ಮಾಡಿ ವಿನೂತನವಾಗಿ ಪ್ರತಿಭಟಿಸಿದ್ದಾರೆ.
ಬೆಳಗಾವಿ, ನವೆಂಬರ್ 7: ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರ ಹೋರಾಟ ತೀವ್ರಗೊಂಡಿದ್ದು, ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಕಬ್ಬು ಬೆಳೆಗಾರರು ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು. ಮನವಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ವಿಭಿನ್ನವಾಗಿ ಪ್ರತಿಭಟಿಸಿದರು.

