ಕಂಡಕ್ಟರ್ ಮೇಲೆ ಹಲ್ಲೆ, ನಾಲ್ವರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ: ಮಾರ್ಟಿನ್ ಮಾಬನಿಯಾಂಗ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 22, 2025 | 2:13 PM

ಭಾಷೆಗೆ ಸಂಬಂಧಿಸಿದಂತೆ ಹಲ್ಲೆ ನಡೆದಿರುವುದು ನಿಜ, ಆರೋಪಿಯು ತನಗೆ ಕನ್ನಡ ಬರಲ್ಲ ಬೇರೆ ಭಾಷೆಯಲ್ಲಿ ಮಾತಾಡಿ ಅಂತ ಹೇಳಿದ ಅಂತ ದೂರುದಾರ ಹೇಳಿದ್ದಾರೆ. ಕಣ್ಮರೆಯಾಗಿರುವ ಆರೋಪಿಗಳ ಪತ್ತೆಗಾಗಿ ಇನ್ಸ್​ಪೆಕ್ಟರ್ ಗಳ ನೇತೃತತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಕಮೀಶನರ್ ಹೇಳಿದರು. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದು ಅಭಿನಂದನೀಯ.

ಬೆಳಗಾವಿ: ನಿನ್ನೆ ಜಿಲ್ಲೆಯ ಮಾರಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸ್ ಕಮೀಶನರ್ ಯಡಾ ಮಾರ್ಟಿನ್ ಮಾಬನಿಯಾಂಗ್ ಸುದ್ದಿಗೋಷ್ಠಿಯೊಂದನ್ನು ನಡೆಸಿ ವಿವರಗಳನ್ನು ನೀಡಿದರು. ಬಸ್ ಪಾಸ್​ ವಿಷಯದಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ನಡೆದಿದೆ, ಅರೋಪಿಯ ಸಹೋದರ ಮತ್ತು ಅವನ ಸಂಗಡಿಗರು ಬಸ್ಸು ಬಾಳೆಕುಂದ್ರಿ ತಲುಪಿದ ಬಳಿಕ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದಾರೆ, ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಮತ್ತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಪರಾರಿಯಾಗಿರುವ ಉಳಿದ ಅರೋಪಿಗಳಿಗಾಗಿ ಶೋಧಕಾರ್ಯ ನಡೆದಿದೆ ಎಂದು ಮಾರ್ಟಿನ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮರಾಠಿ ಯುವಕರಿಂದ ಗೂಂಡಾಗಿರಿ: ಕನ್ನಡ ಮಾತನಾಡು ಅಂದಿದ್ದಕ್ಕೆ ಕಂಡಕ್ಟರ್​​ ಮೇಲೆ ಹಲ್ಲೆ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.