ಅತ್ತಿಬೆಲೆ ಪೆಟ್ರೋಲ್ ಬಂಕ್‌ಗೆ ನುಗ್ಗಿದ ಜಾಗ್ವಾರ್ ಕಾರು: ಹೊತ್ತಿ ಉರಿದ ಪೆಟ್ರೋಲ್ ಬಂಕ್
ಅತ್ತಿಬೆಲೆಯ ಹೆಚ್‌ಪಿ ಪೆಟ್ರೋಲ್ ಬಂಕ್ ಬಳಿ ಚಾಲಕನೊಬ್ಬನ ಅವಾಂತರದಿಂದ ಭೀಕರ ಘಟನೆ ನಡೆದಿದೆ. ಯುವತಿಯೊಂದಿಗೆ ಬಂದಿದ್ದ ಚಾಲಕ ಸಂಜಯ್ ಜಾಗ್ವಾರ್ ಕಾರನ್ನು ಪೆಟ್ರೋಲ್ ಬಂಕ್‌ಗೆ ನುಗ್ಗಿಸಿದ್ದಾನೆ. ಡಿಕ್ಕಿಯ ಬಳಿಕ ಕಾರು ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸಿಬ್ಬಂದಿಗೆ ಗಾಯವಾಗಿದ್ದು, ಸಂಜಯ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆನೇಕಲ್, ಅಕ್ಟೋಬರ್ 8: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಬುಧವಾರ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಚಾಲಕನೊಬ್ಬ ಐಷಾರಾಮಿ ಜಾಗ್ವಾರ್ ಕಾರನ್ನು ನೇರವಾಗಿ ಪೆಟ್ರೋಲ್ ಬಂಕ್‌ಗೆ ನುಗ್ಗಿಸಿದ್ದಾನೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಚಾಲಕ ಕುಡಿದ ಮತ್ತಿನಲ್ಲಿ ಇದ್ದಿರಬಹುದು ಎಂದು ಶಂಕಿಸಲಾಗಿದೆ. ಯುವತಿಯೊಂದಿಗೆ ಕಾರಿನಲ್ಲಿ ಬಂದಿದ್ದ ಸಂಜಯ್ ಎಂಬಾತ, ಮೊದಲು ಪೆಟ್ರೋಲ್ ಬಂಕ್‌ನ ಸಿಬ್ಬಂದಿ ಗುಡ್ಡು ಕುಮಾರ್ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಪೆಟ್ರೋಲ್ ಪಂಪ್‌ಗೆ ಕಾರು ಅಪ್ಪಳಿಸಿದ್ದು, ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಯುವಕ ಮತ್ತು ಯುವತಿ ಇಬ್ಬರೂ ಹೊರ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಿಬ್ಬಂದಿ ಗುಡ್ಡು ಕುಮಾರ್ ಅವರಿಗೆ ಕಾಲಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಪೊಲೀಸರು, ಕಾರು ಚಾಲಕ ಸಂಜಯ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆ ಉದ್ದೇಶಪೂರ್ವಕವೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದವರು ಯಶಸ್ವಿಯಾಗಿ ಬೆಂಕಿ ನಂದಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

