ವಿಜಯೇಂದ್ರನನ್ನು ಕಿತ್ತು ಬಿಸಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ಮುಖ್ಯಾಂಶಗಳು
- ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕಿತ್ತಾಕಿ ಎನ್ನುವ ಆಡಿಯೋ ವೈರಲ್
- ಸದಾನಂದಗೌಡ ಕೇಂದ್ರದ ನಾಯಕರೊಬ್ಬರೊಂದಿಗೆ ಮಾತ್ನಾಡಿದ್ದಾರೆ ಎನ್ನಲಾದ ಆಡಿಯೋ
- ಆಡಿಯೋ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದ್ದಂತೆ ಸ್ಪಷ್ಟನೆ ನೀಡಿದ ಸದಾನಂದಗೌಡ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಉಚ್ಚಾಟನೆ ಕುರಿತು ಮಾಜಿ ಸಿಎಂ ಸದಾನಂದಗೌಡರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ವಿವಾದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸದಾನಂದಗೌಡರು, ಇದು ತಮ್ಮ ವಿರುದ್ಧದ ಪಿತೂರಿ ಎಂದು ಆರೋಪಿಸಿದ್ದು, ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ತಾರಕಕ್ಕೇರಿದೆ. ಇನ್ನು ಆಡಿಯೋ ವೈರಲ್ ಸಂಬಂಧ ಸದಾನಂದಗೌಡ ಪ್ರತಿಕ್ರಿಯಿಸಲು ನಿರಾಕರಿಸಿದಾದರೂ ಒಂದೆಡೆರು ಮಾತುಗಳನ್ನಾಡಿದ್ದಾರೆ.
ಬೆಂಗಳೂರು, (ಜೂನ್ 29): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಉಚ್ಚಾಟನೆ ಕುರಿತು ಮಾಜಿ ಸಿಎಂ ಸದಾನಂದಗೌಡರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ವಿವಾದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸದಾನಂದಗೌಡರು, ಇದು ತಮ್ಮ ವಿರುದ್ಧದ ಪಿತೂರಿ ಎಂದು ಆರೋಪಿಸಿದ್ದು, ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ತಾರಕಕ್ಕೇರಿದೆ. ಇನ್ನು ಆಡಿಯೋ ವೈರಲ್ ಸಂಬಂಧ ಸದಾನಂದಗೌಡ ಪ್ರತಿಕ್ರಿಯಿಸಲು ನಿರಾಕರಿಸಿದಾದರೂ ಒಂದೆಡೆರು ಮಾತುಗಳನ್ನಾಡಿದ್ದಾರೆ. ನೋ ಕಾಮೆಂಟ್ಸ್, ಆಡಿಯೋ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ಆಡಿಯೋ ಬಗ್ಗೆ ನನಗೆ ಗೊತ್ತಿಲ್ಲ, ಹಾಗಾಗಿ ಉತ್ತರ ಕೊಡುವುದಿಲ್ಲ. ಆಡಿಯೋ ಬಗ್ಗೆ ಸತ್ಯ ಸಂಗತಿ ಹೊರಬರಲಿ. ನನ್ನ ಬಗ್ಗೆ ಬಹಳ ದಿನದಿಂದ ಚರ್ಚೆ ಆಗುತ್ತಿತ್ತು. ಕೋರ್ ಕಮಿಟಿ ಸಭೆಯಲ್ಲಿ ಕೆಲವು ಮಾತುಗಳನ್ನು ಹೇಳಿದ್ದೇನೆ. ಕೇಂದ್ರ ನಾಯಕರು, ರಾಜ್ಯ ನಾಯಕರು ಕೇಳಿದ್ರೆ ಉತ್ತರ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ವಿಜಯೇಂದ್ರರನ್ನ ಕೆಳಗಿಳಿಸಲು ಪ್ಲ್ಯಾನ್? ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್
Published on: Jun 29, 2026 04:34 PM
ಕೆಪಿಎಸ್ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!

