AUS vs PAK, ICC World Cup: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ಆಟಗಾರರ ಭರ್ಜರಿ ಅಭ್ಯಾಸ: ವಿಡಿಯೋ ನೋಡಿ
Pakistan Team Pratice in M. Chinnaswami Stadium: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಂದು ಐಸಿಸಿ ಏಕದಿನ ವಿಶ್ವಕಪ್ನ 18ನೇ ಪಂದ್ಯ ನಡೆಯಲಿದ್ದು, ಪಾಕಿಸ್ತಾನ-ಆಸ್ಟ್ರೇಲಿಯಾ ಮುಖಾಮುಖಿ ಆಗಲಿದೆ. ನಾಲ್ಕು ದಿನ ಮುಂಚಿತವಾಗಿಯೇ ಬೆಂಗಳೂರಿಗೆ ಬಂದಿದ್ದ ಪಾಕ್ ಆಟಗಾರರು ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ.
ಐಸಿಸಿ ಏಕದಿನ ವಿಶ್ವಕಪ್ನಲ್ಲಿ (ICC World Cup) ಇಂದು ನಡೆಯಲಿರುವ 18ನೇ ಪಂದ್ಯದಲ್ಲಿ ಬಾಬರ್ ಅಝಂ ನಾಯಕತ್ವದ ಪಾಕಿಸ್ತಾನ ಮತ್ತು ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡ ಮುಖಾಮುಖಿ ಆಗುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯವನ್ನು ಏರ್ಪಡಿಸಲಾಗಿದೆ. ನಾಲ್ಕು ದಿನ ಮುಂಚಿತವಾಗಿಯೇ ಬೆಂಗಳೂರಿಗೆ ಬಂದಿದ್ದ ಪಾಕ್ ಆಟಗಾರರು ಚಿನ್ನಸ್ವಾಮಿಯಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಭದ್ರತೆ ಕೂಡ ಒದಗಿಸಲಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಟಾಸ್ ಪ್ರಕ್ರಿಯೆ ಹಾಗೂ ಪಂದ್ಯ ಆರಂಭವಾಗಲಿದೆ. ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾಗಿದ್ದು, ಸ್ಟೇಡಿಯಂ ಹೌಸ್ಫುಲ್ ಆಗುವ ನಿರೀಕ್ಷೆ ಇದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ