Ashes 2025: ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
Australia vs England, 3rd Test: ಈ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 4ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 207 ರನ್ಗಳಿಸಿದ್ದರು. ಇದೀಗ ಕೊನೆಯ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿರುವ ಇಂಗ್ಲೆಂಡ್ 1 ವಿಕೆಟ್ ಕಳೆದುಕೊಂಡು 102 ರನ್ ಪೇರಿಸಿದೆ. ಅಷ್ಟೇ ಅಲ್ಲದೆ ಭೋಜನಾ ವಿರಾಮದ ವೇಳೆಗೆ ಆಂಗ್ಲರು 7 ವಿಕೆಟ್ ಕಳೆದುಕೊಂಡು 309 ರನ್ ಕಲೆಹಾಕಿದೆ.
ಆ್ಯಶಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ರಣರೋಚಕ ಘಟ್ಟದತ್ತ ಸಾಗಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಪ್ರಥಮ ಇನಿಂಗ್ಸ್ನಲ್ಲಿ ಬರೋಬ್ಬರಿ 371 ರನ್ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವನ್ನು 286 ರನ್ಗಳಿಗೆ ಆಲೌಟ್ ಮಾಡುವಲ್ಲಿ ಆಸೀಸ್ ಬೌಲರ್ಗಳು ಯಶಸ್ವಿಯಾದರು.
ಮೊದಲ ಇನಿಂಗ್ಸ್ನಲ್ಲಿನ 85 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 349 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕೊನೆಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡಕ್ಕೆ ಬರೋಬ್ಬರಿ 435 ರನ್ಗಳ ಗುರಿ ನೀಡಿದೆ.
ಈ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 4ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 207 ರನ್ಗಳಿಸಿದ್ದರು. ಇದೀಗ ಕೊನೆಯ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿರುವ ಇಂಗ್ಲೆಂಡ್ 1 ವಿಕೆಟ್ ಕಳೆದುಕೊಂಡು 102 ರನ್ ಪೇರಿಸಿದೆ. ಅಷ್ಟೇ ಅಲ್ಲದೆ ಭೋಜನಾ ವಿರಾಮದ ವೇಳೆಗೆ ಆಂಗ್ಲರು 7 ವಿಕೆಟ್ ಕಳೆದುಕೊಂಡು 309 ರನ್ ಕಲೆಹಾಕಿದೆ.
ಸದ್ಯ ಕ್ರೀಸ್ನಲ್ಲಿ ವಿಲ್ ಜಾಕ್ಸ್ ಹಾಗೂ ಬ್ರೈಡನ್ ಕಾರ್ಸ್ ಬ್ಯಾಟಿಂಗ್ ಮುಂದುವರೆಸಿದ್ದು, ಇನ್ನು 126 ರನ್ಗಳಿಸಿದರೆ ಪಂದ್ಯವನ್ನು ಗೆಲ್ಲಬಹುದು. ಅತ್ತ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 3 ವಿಕೆಟ್ಗಳ ಅವಶ್ಯಕತೆಯಿದೆ. ಹೀಗಾಗಿ ಈ ರಣರೋಚಕ ಪಂದ್ಯದಲ್ಲಿ ಗೆಲ್ಲೋರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
