AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 2 ದಿನಗಳಲ್ಲಿ 16 ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ

ಕೇವಲ 2 ದಿನಗಳಲ್ಲಿ 16 ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ

ಝಾಹಿರ್ ಯೂಸುಫ್
|

Updated on: Mar 08, 2026 | 9:50 AM

Share

Australia Women vs India Women: ಮೊದಲ ಇನಿಂಗ್ಸ್​ನ ಹಿನ್ನಡೆಯನ್ನು ಸರಿದೂಗಿಸುವ ಮುನ್ನವೇ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅತ್ತ ಇದೀಗ ಇಡೀ ಪಂದ್ಯದ ಮೇಲೆ ಆಸ್ಟ್ರೇಲಿಯಾ ತಂಡವು ಹಿಡಿತ ಸಾಧಿಸಿದ್ದು. ಮೂರನೇ ದಿನದಾಟದಲ್ಲೇ ಟೀಮ್ ಇಂಡಿಯಾವನ್ನು ಆಲೌಟ್ ಮಾಡುವ ವಿಶ್ವಾಸದಲ್ಲಿದೆ.

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಕಳಪೆ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 198 ರನ್​ಗಳಿಸಿ ಆಲೌಟ್ ಆಗಿತ್ತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ಎರಡನೇ ದಿನದಾಟದಲ್ಲಿ 323 ರನ್​ಗಳಿಸಿ ಆಲೌಟ್ ಆಯಿತು. 125 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 2ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು ಕೇವಲ 105 ರನ್​ಗಳಿಸಿದೆ.

ಅಂದರೆ ಮೊದಲ ಇನಿಂಗ್ಸ್​ನ ಹಿನ್ನಡೆಯನ್ನು ಸರಿದೂಗಿಸುವ ಮುನ್ನವೇ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅತ್ತ ಇದೀಗ ಇಡೀ ಪಂದ್ಯದ ಮೇಲೆ ಆಸ್ಟ್ರೇಲಿಯಾ ತಂಡವು ಹಿಡಿತ ಸಾಧಿಸಿದ್ದು. ಮೂರನೇ ದಿನದಾಟದಲ್ಲೇ ಟೀಮ್ ಇಂಡಿಯಾವನ್ನು ಆಲೌಟ್ ಮಾಡುವ ವಿಶ್ವಾಸದಲ್ಲಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಅಲಿಸಾ ಹೀಲಿ (ನಾಯಕಿ), ಫೋಬೆ ಲಿಚ್‌ಫೀಲ್ಡ್, ಜಾರ್ಜಿಯಾ ವೋಲ್, ಎಲಿಸ್ ಪೆರ್ರಿ, ಅನ್ನಾಬೆಲ್ ಸದರ್ಲ್ಯಾಂಡ್,  ಬೆತ್ ಮೂನಿ (ವಿಕೆಟ್ ಕೀಪರ್), ಆಶ್ಲೀ ಗಾರ್ಡ್ನರ್, ತಹ್ಲಿಯಾ ಮೆಕ್‌ಗ್ರಾತ್,  ಅಲಾನಾ ಕಿಂಗ್,  ಲೂಸಿ ಹ್ಯಾಮಿಲ್ಟನ್, ಡಾರ್ಸಿ ಬ್ರೌನ್.

ಭಾರತ ಪ್ಲೇಯಿಂಗ್ 11: ಹರ್ಮನ್​ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಪ್ರತೀಕಾ ರಾವಲ್, ಜೆಮಿಮಾ ರೊಡ್ರಿಗಸ್,  ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಕಾಶ್ವೀ ಗೌತಮ್, ಸ್ನೇಹ್ ರಾಣಾ, ಸಯಾಲಿ ಸತ್ಘರೆ, ಕ್ರಾಂತಿ ಗೌಡ್.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More