ಬೆಂಗಳೂರು: ಹೃದಯಾಘಾತಕ್ಕೆ ಆಟೋ ಚಾಲಕ ಬಲಿ, ಎದೆ ನೋವಿನಿಂದ ಒದ್ದಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಆಟೋ ಚಾಲಕನೋರ್ವ ಹೃದಯಾಘಾತಕ್ಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಿಮ್ಮೇಶ್ ಟೀ ಕುಡಿಯಲು ಆಟೋ ನಿಲ್ಲಿಸಿ ಟೀ ಅಂಗಡಿಗೆ ತೆರಳುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ಆಟೋದಲ್ಲಿ ನಿಲ್ಲಿಸುತ್ತಿದ್ದಾಗ ತಿಮ್ಮೇಶ್ ಎದೆಯನ್ನ ಸವರಿಕೊಳ್ಳುತ್ತ ಆಟೋದಿಂದ ಇಳಿದು ಹೋಗುವ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರು, ಆ.22: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಗು ನಗುತ ಚೆನ್ನಾಗಿಯೇ ಓಡಾಡಿಕೊಂಡಿದ್ದವರು ಕ್ಷಣ ಮಾತ್ರದಲ್ಲೇ ಎದೆ ಹಿಡಿದು ಕುಸಿದು ಬೀಳುವ ಘಟನೆಗಳು ನಡೆಯುತ್ತಿವೆ. ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿ ಆಟೋ ಚಾಲಕನೋರ್ವ ಹೃದಯಾಘಾತಕ್ಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತಿಮ್ಮೇಶ್ (53) ಮೃತ ದುರ್ದೈವಿ. ಮಂಡ್ಯ ಜಿಲ್ಲೆಯ ತಿಮ್ಮೇಶ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು. ಆದ್ರೆ ಇಂದು ವಿಧಿಯಾಟಕ್ಕೆ ಶರಣಾಗಿದ್ದಾರೆ.
ತಿಮ್ಮೇಶ್ ಟೀ ಕುಡಿಯಲು ಆಟೋ ನಿಲ್ಲಿಸಿ ಟೀ ಅಂಗಡಿಗೆ ತೆರಳುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ಆಟೋದಲ್ಲಿ ನಿಲ್ಲಿಸುತ್ತಿದ್ದಾಗ ತಿಮ್ಮೇಶ್ ಎದೆಯನ್ನ ಸವರಿಕೊಳ್ಳುತ್ತ ಆಟೋದಿಂದ ಇಳಿದು ಹೋಗುವ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Published on: Aug 22, 2023 12:50 PM
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
