ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು, ಸಿಸಿಟಿವಿಯಲ್ಲಿ ಖದೀಮರ ಕೈಚಳಕ ಸೆರೆ!

Edited By:

Updated on: Sep 02, 2026 | 11:11 AM

ನೆಲಮಂಗಲದ ಕೆ.ಎಸ್.ಆರ್.ಟಿ.ಸಿ ಲೇಔಟ್‌ನ ರಾಯನ್ ನಗರದಲ್ಲಿ ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋ ಒಂದರ ಚಕ್ರಗಳನ್ನು ಮಧ್ಯರಾತ್ರಿ ಖದೀಮರು ಕದ್ದೊಯ್ದಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ವಾಹನ ಮಾಲೀಕರಲ್ಲಿ ಆತಂಕ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ, ಸೆಪ್ಟೆಂಬರ್ 02: ನಗರದ ಕೆ.ಎಸ್.ಆರ್.ಟಿ.ಸಿ ಲೇಔಟ್‌ನ ರಾಯನ್ ನಗರದಲ್ಲಿ ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರಗಳನ್ನು ಖದೀಮರು ಕದ್ದೊಯ್ದಿದ್ದಾರೆ. ಮಧ್ಯರಾತ್ರಿ ನಿಲ್ಲಿಸಿದ್ದ ಜಾಗದಲ್ಲೇ ಆಟೋ ಚಕ್ರಗಳನ್ನು ಬಿಚ್ಚಿ ಕಳ್ಳರು ಎಸ್ಕೇಪ್ ಆಗಿದ್ದು, ಈ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ. ರಾತ್ರೋರಾತ್ರಿ ನಡೆದ ಈ ಕಳ್ಳತನದಿಂದ ವಾಹನ ಮಾಲೀಕರು ತೀವ್ರ ಆತಂಕಗೊಂಡಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More