ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ; ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ ಬಂದ್
ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ಹಿಮಪಾತ ಸಂಭವಿಸಿದ್ದು, ಇದುವರೆಗೆ ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರ-ಲೇಹ್ ಹೆದ್ದಾರಿಯ ಜೋಜಿಲಾ ಪಾಸ್‌ನಲ್ಲಿರುವ ಶೈತಾನ್ ನಲ್ಲಹ್‌ನಲ್ಲಿ ಹಿಮಪಾತವು ಕೆಲವು ವಾಹನಗಳನ್ನು ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಜೀವಹಾನಿ ಸಂಭವಿಸಿದ ವರದಿಗಳಿಲ್ಲದಿದ್ದರೂ, ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
ಶ್ರೀನಗರ, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದಲ್ಲಿ (Avalanche in Kashmir) ಭಾರೀ ಹಿಮಪಾತವಾಗುತ್ತಿದೆ. ಝೋಜಿ ಲಾ ಪಾಸ್‌ನ ಶೈತಾನ್ ನಲ್ಲದಲ್ಲಿ ಹಿಮಪಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಹಿಮಪಾತದಿಂದಾಗಿ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಇಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಝೋಜಿಲಾ ಪಾಸ್ ಬಳಿ ಹಿಮಪಾತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಹಲವಾರು ವಾಹನಗಳು ಹಿಮಪಾತದಲ್ಲಿ ಸಿಲುಕಿದ್ದು, ಇಲ್ಲಿಯವರೆಗೆ ಯಾವುದೇ ಜೀವಹಾನಿ ವರದಿಯಾಗಿಲ್ಲ. ಹಿಮವನ್ನು ತೆರವುಗೊಳಿಸುವ ಪ್ರಯತ್ನಗಳು ಮುಂದುವರೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್

