ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ: ಹೊಸಕೋಟೆ ಪಟ್ಟಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್: ಮದ್ಯ ಮಾರಾಟ ನಿಷೇಧ
ನಗರದಲ್ಲಿ ರಥೋತ್ಸವ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಎಸ್ಪಿ ನೇತೃತ್ವದಲ್ಲಿ ಎಎಸ್ಪಿ, ಮೂವರು ಡಿವೈಎಸ್ಪಿ, ಇನ್ಸಪೇಕ್ಟರ್, ಸಬ್ ಇನ್ಸಪೇಕ್ಟರ್ ಸೇರಿದಂತೆ 400ಕ್ಕೂ ಅಧಿಕ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಹೊಸಕೋಟೆ: ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಹಿನ್ನೆಲೆ ನಗರದಾದ್ಯಂತ ಮಧ್ಯ ಮಾರಾಟ ನಿಷೇಧ ಮಾಡಲಾಗಿದೆ. ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಜನ ಭಾಗವಹಿಸುವ ಹಿನ್ನೆಲೆಯಲ್ಲಿ ಇಂದು ಬೆಳಗಿನಿಂದ ನಾಳೆ ಬೆಳಗ್ಗೆವರೆಗೂ ಮಧ್ಯ ಮಾರಾಟ ನಿಷೇಧಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಸಿ ಶ್ರೀನಿವಾಸ್ ಆದೇಶ ಮಾಡಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಅದೇ ರೀತಿಯಾಗಿ ನಗರದಲ್ಲಿ ರಥೋತ್ಸವ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಎಸ್ಪಿ ನೇತೃತ್ವದಲ್ಲಿ ಎಎಸ್ಪಿ, ಮೂವರು ಡಿವೈಎಸ್ಪಿ, ಇನ್ಸಪೇಕ್ಟರ್, ಸಬ್ ಇನ್ಸಪೇಕ್ಟರ್ ಸೇರಿದಂತೆ 400ಕ್ಕೂ ಅಧಿಕ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರಿಂದ ಪಥ ಸಂಚಲನ ಮಾಡಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ರಥೋತ್ಸವ ನಡೆಯುವ ನಗರದ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶಾರತ್ಗೆ ಪ್ರತಿಷ್ಟೆಯಾಗಿರೂ ರಥೋತ್ಸವ, ಬೆಳಗ್ಗೆ ಬ್ರಹ್ಮರಥೋತ್ಸವ ಮತ್ತು ಸಂಜೆ ಕರಗ ಹಿನ್ನೆಲೆ ಖಾಕಿ ಕಣ್ಗಾವಲು ವಹಿಸಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.