Video: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಡಿಸ್ಟರ್ಬ್​ ಮಾಡಿದ ರಾಹುಲ್ ಗಾಂಧಿ

Updated on: Feb 12, 2026 | 8:13 AM

ಸಂಸತ್ತಿನ ಮುಂಭಾಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಅಶ್ವಿನಿ ವೈಷ್ಣವ್ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯೆ ಬಂದು ತೊಂದರೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಅವರಿಬ್ಬರು ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಸಮಯದಲ್ಲಿ ರಾಹುಲ್ ಗಾಂಧಿ ಇವರಿಬ್ಬರು ಸಚಿವರ ಪಕ್ಕ ಬಂದು ನಿಂತಿದ್ದರು. ಕೂಡಲೇ ಸಚಿವರು ಅಲ್ಲಿಂದ ಹೋಗಿದ್ದಾರೆ. ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಲಿರಲಿಲ್ಲ ಎಂದು ಬಿಜೆಪಿ ಫೇಸ್​​ಬುಕ್​​ನಲ್ಲಿ ವಿಡಿಯೋವನ್ನು ಹಂಚಿಕೊಂಡಿದೆ.

ನವದೆಹಲಿ, ಫೆಬ್ರವರಿ 12: ಸಂಸತ್ತಿನ ಮುಂಭಾಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಅಶ್ವಿನಿ ವೈಷ್ಣವ್ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯೆ ಬಂದು ತೊಂದರೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರು ನಾಯಕರು ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಸಮಯದಲ್ಲಿ ರಾಹುಲ್ ಗಾಂಧಿ  ಸಚಿವರ ಪಕ್ಕ ಬಂದು ನಿಂತಿದ್ದರು.

ಕೂಡಲೇ ಇರುಸು ಮುರುಸು ಉಂಟಾಗಿ ಸಚಿವರು ಅಲ್ಲಿಂದ ಹೋಗಿದ್ದಾರೆ. ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಲಿರಲಿಲ್ಲ ಎಂದು ಬಿಜೆಪಿ ಫೇಸ್​​ಬುಕ್​​ನಲ್ಲಿ ವಿಡಿಯೋವನ್ನು ಹಂಚಿಕೊಂಡಿದೆ. ಸ್ವಲ್ಪ ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರಿದ್ದಾರೆ ಎಂಬ ಏಕೈಕ ಕಾರಣಕ್ಕೆ ಸಂಸದ ರವನೀತ್‌ ಸಿಂಗ್‌ ಬಿಟ್ಟು ಅವರನ್ನು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಗದ್ದಾರ್‌ (ದ್ರೋಹಿ) ಎಂದು ಕರೆಯುವ ಮೂಲಕ ತೀವ್ರ ವಿವಾದ ಸೃಷ್ಟಿಸಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More