Video: ನನ್ನ ಭುಜದ ಮೇಲೆ ತ್ರಿವರ್ಣ ಧ್ವಜವಿದೆ: ಬಾಹ್ಯಾಕಾಶದಿಂದ ಬಂದ ಶುಭಾಂಶು ಶುಕ್ಲಾರ ಮೊದಲ ಸಂದೇಶ
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರೆ ಮೂವರನ್ನು ಹೊತ್ತ ಆಕ್ಸಿಯಮ್-4 ಮಿಷನ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಹೊರಟಿದೆ. ಈ ಕಾರ್ಯಾಚರಣೆಯನ್ನು ಬುಧವಾರ ಮಧ್ಯಾಹ್ನ 12.1ಕ್ಕೆ ಪ್ರಾರಂಭಿಸಲಾಯಿತು. ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್ -4 ಮಿಷನ್ ಕೆನಡಿ ಬಾಹ್ಯಾಕಾಶ ಕೇಂದ್ರದ ಸಂಕೀರ್ಣ 39A ನಿಂದ ಹಾರಿತ್ತು. ಶುಭಾಂಶು ಹೊರತುಪಡಿಸಿ, ಈ ಕಾರ್ಯಾಚರಣೆಯಲ್ಲಿ ಇನ್ನೂ 3 ಜನರಿದ್ದಾರೆ, ಅವರು 28 ಗಂಟೆಗಳ ಪ್ರಯಾಣದ ನಂತರ ಭಾರತೀಯ ಸಮಯದಂತೆ ಗುರುವಾರ ಸಂಜೆ 4.30 ಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಲಿದ್ದಾರೆ. ವಿಮಾನವು ಹೊರಟ ತಕ್ಷಣ ಶುಭಾಂಶು ಶುಕ್ಲಾ ಅವರ ಮೊದಲ ಸಂದೇಶ ಹೊರಬಂದಿದೆ.

ಅವರು ಹಿಂದಿಯಲ್ಲಿ ಸಂದೇಶ ಕಳುಹಿಸಿದ್ದಾರೆ. ‘‘ ನಮಸ್ಕಾರ ನಮ್ಮ ಪ್ರೀತಿಯ ದೇಶವಾಸಿಗಳೇ, 41 ವರ್ಷಗಳ ನಂತರ ನಾವು ಮತ್ತೆ ಬಾಹ್ಯಾಕಾಶ ತಲುಪಿದ್ದೇವೆ. ಈ ಸಮಯದಲ್ಲಿ ನಾವು ಗಂಟೆಗೆ 7.5ಕಿಲೋಮೀಟರ್ ವೇಗದಲ್ಲಿ ಭೂಮಿಯ ಸುತ್ತಲೂ ಚಲಿಸುತ್ತೇವೆ. ನನ್ನ ಭುಜದ ಮೇಲೆ ತ್ರಿವರ್ಣ ಧ್ವಜವಿದೆ. ಅದು ನಾನು ಒಬ್ಬಂಟಿಯಲ್ಲ, ನೀವೆಲ್ಲರೂ ನನ್ನೊಂದಿಗಿದ್ದೀರಿ ಎನ್ನುವ ಭಾವನೆಯನ್ನು ನೀಡುತ್ತದೆ’’ ಎಂದು ಹೇಳಿದ್ದಾರೆ.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ನನ್ನ ಪ್ರಯಾಣದ ಆರಂಭವಲ್ಲ, ಇದು ಭಾರತದ ಮಾನವ ಸಹಿತ ಬಾಹ್ಯಾಕಾಶಯಾನದ ಆರಂಭ. ನೀವೆಲ್ಲರೂ ಈ ಪ್ರಯಾಣದ ಭಾಗವಾಗಿರಬೇಕೆಂದು ನಾನು ಬಯಸುತ್ತೇನೆ. ನಾವೆಲ್ಲರೂ ಒಟ್ಟಾಗಿ ಭಾರತದ ಮಾನವ ಬಾಹ್ಯಾಕಾಶ ಕಾರ್ಯಕ್ರಮವನ್ನು ಪ್ರಾರಂಭಿಸೋಣ. ಜೈ ಹಿಂದ್, ಜೈ ಭಾರತ್ ಎಂದು ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ