ಭಾರತದ ಪಾಲಿಗೆ ಐತಿಹಾಸಿಕ ಕ್ಷಣ; ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಐತಿಹಾಸಿಕ ಕ್ಷಣದಲ್ಲಿ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿದ್ದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಆಕ್ಸಿಯಮ್-4 ಸಿಬ್ಬಂದಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) 18 ದಿನಗಳ ಕಾಲ ಉಳಿದ ನಂತರ ಪೆಸಿಫಿಕ್ ಮಹಾಸಾಗರದಲ್ಲಿ ಭೂಮಿಗೆ ಹಾರಿದ್ದಾರೆ. ಡ್ರ್ಯಾಗನ್ ಕ್ಯಾಪ್ಸುಲ್ ಕೆಳಗೆ ಬೀಳುತ್ತಿದ್ದಂತೆ ಶುಭಾಂಶು ಶುಕ್ಲಾ ISSನಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದರು. ಕೆಲವೇ ಕ್ಷಣಗಳಲ್ಲಿ ಅವರನ್ನು ಕ್ಯಾಪ್ಸುಲ್ನಿಂದ ಹೊರಗೆ ಕರೆತರಲಾಗುವುದು.
ನವದೆಹಲಿ, ಜುಲೈ 15: ಇಂದು ಭಾರತದ ಪಾಲಿಗೆ ಐತಿಹಾಸಿಕ ದಿನ. ಆಕ್ಸಿಯಮ್ -4 ಮಿಷನ್ ಭಾಗವಾಗಿ ಬಾಹ್ಯಾಕಾಶಕ್ಕೆ ಹಾರಿದ್ದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಮತ್ತು ಇನ್ನೂ ಮೂವರು ಗಗನಯಾನಿಗಳ ತಂಡ 18 ದಿನಗಳ ಬಾಹ್ಯಾಕಾಶ ಪ್ರವಾಸ ಮುಗಿಸಿ ಭೂಮಿಗೆ ಮರಳಿದ್ದಾರೆ. ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಇತರ ಮೂವರು ಗಗನಯಾತ್ರಿಗಳೊಂದಿಗೆ ಶುಭಾಂಶು ಶುಕ್ಲಾ ಕ್ಯಾಲಿಫೋರ್ನಿಯಾ ಕರಾವಳಿಯ ಪೆಸಿಫಿಕ್ ಮಹಾಸಾಗರದಲ್ಲಿ ಇಳಿದಿದ್ದಾರೆ. ಅವರು ಇರುವ ಕ್ಯಾಪ್ಸುಲ್ನಿಂದ ಕೆಲವೇ ಕ್ಷಣಗಳಲ್ಲಿ ಅವರನ್ನು ಸುರಕ್ಷಿತವಾಗಿ ಹೊರಗೆ ತರಲು ನಾಸಾ ಸಿಬ್ಬಂದಿ ಸಜ್ಜಾಗಿದ್ದಾರೆ. ಈ ಮೂಲಕ ಆಕ್ಸಿಯಂ-4 ಮಿಷನ್ ಯಶಸ್ವಿಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jul 15, 2025 03:39 PM
Latest Videos

ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್ಟಿಎಸ್

ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
