ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ; ಮೊದಲ ವಿಡಿಯೋ ಇಲ್ಲಿದೆ
ಭಾರತದ ಗಗನಯಾನಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದ ಮೊದಲ ಭಾರತೀಯ ಎಂಬ ಇತಿಹಾಸವನ್ನು ನಿರ್ಮಿಸಿದ್ದಾರೆ. ಆಕ್ಸಿಯಮ್ ಮಿಷನ್ -4 ಡ್ರ್ಯಾಗನ್ ಕ್ಯಾಪ್ಸುಲ್ ಅನ್ನು ದೋಷರಹಿತ ಡಾಕಿಂಗ್‌ಗೆ ಯಶಸ್ವಿಯಾಗಿ ಪೈಲಟ್ ಮಾಡಿದ್ದಾರೆ. ಬಾಹ್ಯಾಕಾಶದಿಂದ ಬಂದ ಮೊದಲ ವಿಡಿಯೋ ಇಲ್ಲಿದೆ.
ನವದೆಹಲಿ, ಜೂನ್ 26: ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಇಂದು ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆದಿದ್ದಾರೆ. ಅವರು ಆಕ್ಸಿಯಮ್ ಮಿಷನ್ 4ನಲ್ಲಿ ತಮ್ಮ ಮೂವರು ಸಿಬ್ಬಂದಿಯನ್ನು ಹೊತ್ತೊಯ್ದ ಸ್ಪೇಸ್‌ಎಕ್ಸ್ ಡ್ರ್ಯಾಗನ್ ಕ್ಯಾಪ್ಸುಲ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್)ದೊಂದಿಗೆ ಯಶಸ್ವಿಯಾಗಿ ಡಾಕ್ ಮಾಡಿದರು. ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಸಿಬ್ಬಂದಿಯನ್ನು ಇಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಾಲಿಡುತ್ತಿದ್ದಂತೆ ಅವರಿಗೆ ಅಪ್ಪುಗೆ ಮತ್ತು ಪಾನೀಯದೊಂದಿಗೆ ಸ್ವಾಗತಿಸಲಾಯಿತು. ಬಾಹ್ಯಾಕಾಶದಿಂದ ಬಂದ ಮೊದಲ ವಿಡಿಯೋ ಇಲ್ಲಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jun 26, 2025 06:42 PM