AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳಿಯ ಕೃತ್ಯ!

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳಿಯ ಕೃತ್ಯ!

ಅಕ್ಷಯ್​ ಪಲ್ಲಮಜಲು​​
|

Updated on:Apr 03, 2026 | 3:40 PM

Share

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಗ್ರಾಹಕಿಯ ಸೋಗಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದಾಳೆ. ಆಭರಣ ಅಂಗಡಿಗೆ ಬಂದು 26 ಗ್ರಾಂ ಚಿನ್ನದ ಸರ ಮತ್ತು ನೆಕ್ಲೇಸ್‌ಗಳನ್ನು ಕಳ್ಳತನ ಮಾಡಿದ್ದಾಳೆ. ಇದರ ಮೌಲ್ಯ 3.8 ಲಕ್ಷ ರೂ. ಅಂಗಡಿಯ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಮಹಿಳೆ ತನ್ನ ಸಹಚರನೊಂದಿಗೆ ಬೈಕ್‌ನಲ್ಲಿ ಪರಾರಿಯಾಗಿದ್ದಾಳೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಯೋಧ್ಯೆ, ಏ.3: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಗ್ರಾಹಕಿಯ ಸೋಗಿನಲ್ಲಿ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ನಡೆದಿದೆ. ಅಯೋಧ್ಯೆಯ ಜನನಿಬಿಡ ಪ್ರದೇಶದಲ್ಲಿರುವ ಆಭರಣದ ಅಂಗಡಿಯೊಂದಕ್ಕೆ ಬಂದ ಮಹಿಳೆ, ಆಭರಣಗಳನ್ನು ಖರೀದಿಸುವ ನೆಪದಲ್ಲಿ ಒಳಬಂದಿದ್ದಾಳೆ. ಅಂಗಡಿಯವರು ಆಭರಣಗಳನ್ನು ತೋರಿಸುತ್ತಿದ್ದಾಗ ಸಮಯ ಸಾಧಿಸಿದ ಆಕೆ, ಸುಮಾರು 26 ಗ್ರಾಂ ತೂಕದ ಚಿನ್ನದ ಸರ ಮತ್ತು ನೆಕ್ಲೇಸ್‌ ಅನ್ನು ತನ್ನೊಂದಿಗೆ ತಂದಿದ್ದ ಬಟ್ಟೆಯೊಳಗೆ ಅಡಗಿಸಿಟ್ಟುಕೊಂಡಿದ್ದಾಳೆ. ಕಳುವಾದ ಈ ಆಭರಣಗಳ ಮೌಲ್ಯ ಸುಮಾರು 3,80,000 ರೂಪಾಯಿಗಳಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಅಂಗಡಿಯಿಂದ ಹೊರಬಂದ ತಕ್ಷಣವೇ ಹತ್ತಿರದಲ್ಲೇ ಬೈಕ್‌ನೊಂದಿಗೆ ಕಾಯುತ್ತಿದ್ದ ತನ್ನ ಸಹಚರನ ಜೊತೆಗೂಡಿ ಮಹಿಳೆ ಸ್ಥಳದಿಂದ ಪರಾರಿಯಾಗಿದ್ದಾಳೆ. ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಕೃತ್ಯದ ದೃಶ್ಯಗಳು ಸೆರೆಯಾಗಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 03, 2026 03:40 PM
Follow Us