Video: ಅಯೋಧ್ಯೆ ರಾಮಮಂದಿರದ ಹುಂಡಿ ಹಣದಿಂದಲೇ ಹೊಸ ಮನೆ ಕಟ್ಟಿದ ಆರೋಪಿ

Updated on: Jul 02, 2026 | 10:48 AM

ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ, ಕದ್ದ ಹಣದಿಂದ ಹೊಸ ಮನೆ ಕಟ್ಟಿದ ಆರೋಪಿ ಅನುಕಲ್ಪ್ ಮಿಶ್ರಾ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. SIT ತನಿಖೆಯಲ್ಲಿ ಲಕ್ಷಾಂತರ ರೂಪಾಯಿ ಹಣ ವಶಪಡಿಸಿಕೊಳ್ಳಲಾಗಿದ್ದು, ಈತನ ಕುಟುಂಬಸ್ಥರ ಮತ್ತು ಟ್ರಸ್ಟ್‌ ಅಧಿಕಾರಿಗಳ ಪಾತ್ರದ ಬಗ್ಗೆಯೂ ಶೋಧ ನಡೆಸಲಾಗುತ್ತಿದೆ.

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ಕಳ್ಳತನ ಪ್ರಕರಣದಲ್ಲಿ ಪ್ರಮುಖ ಆರೋಪಿ ಅನುಕಲ್ಪ್ ಮಿಶ್ರಾ ಕದ್ದ ದೇಣಿಗೆ ಹಣದಿಂದಲೇ ಮನೆ ಕಟ್ಟಿದ್ದು ಬೆಳಕಿಗೆ ಬಂದಿದೆ. ಅನುಕಲ್ಪ್​ನ ಇನಾಯತ್​ ನಗರದ ಬಸವ ಮುತಲ್ಕೆ ಗ್ರಾಮದಲ್ಲಿನ ಹೊಸ ಮನೆ ಸೇರಿದಂತೆ ಆತನ ತಂದೆ ಮತ್ತು ಮೂವರು ಸಹೋದರರ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಭಕ್ತರು ಭಕ್ತಿಯಿಂದ ರಾಮಮಂದಿರಕ್ಕೆ ನೀಡಿದ್ದ ಹುಂಡಿ ಹಣವನ್ನು ಕಳವು ಮಾಡಿದ ಅನುಕಲ್ಪ್, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT) ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದೆ. ಜೂನ್ 23 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ SIT ಪ್ರಾಥಮಿಕ ವರದಿ ಸಲ್ಲಿಸಿದ್ದು, ಅನೇಕ ಆಘಾತಕಾರಿ ಅಂಶಗಳು ಬಹಿರಂಗಗೊಂಡಿವೆ. SIT ಅಧಿಕಾರಿಗಳು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ ಇದುವರೆಗೆ ಸುಮಾರು 80 ಲಕ್ಷ ರೂಪಾಯಿಯಷ್ಟು ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಸಂಪಾದಿಸಿದ ಹಣವನ್ನು ಎಲ್ಲಿ ಹೂಡಿಕೆ ಮಾಡಲಾಗಿದೆ ಎಂಬುದರ ಬಗ್ಗೆ ತೀವ್ರ ವಿಚಾರಣೆ ನಡೆಯುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More