‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ

Updated on: Jun 22, 2026 | 6:52 PM

‘ಅಯೋಗ್ಯ 2’ ಸಿನಿಮಾದ ಆಡಿಯೋ ಬಿಡುಗಡೆ ಸಂದರ್ಭದಲ್ಲಿ ನಟ ಸತೀಶ್ ನೀನಾಸಂ ಅವರು, ‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’ ಎಂದು ಹೇಳಿದ್ದು ವಿವಾದಕ್ಕೆ ಕಾರಣ ಆಗಿದೆ. ಈ ಬಗ್ಗೆ ಸಭೆ ನಡೆಸಲಾಗಿದ್ದು, ಸತೀಶ್ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

‘ಅಯೋಗ್ಯ 2’ ಸಿನಿಮಾದ ಆಡಿಯೋ ಬಿಡುಗಡೆ ಸಂದರ್ಭದಲ್ಲಿ ನಟ ಸತೀಶ್ ನೀನಾಸಂ (Sathish Ninasam) ಅವರು ಮಾತನಾಡುವಾಗ ‘ನಿರ್ಮಾಪಕರು ಎಜುಕೇಟೆಡ್ ಆಗಿರಬೇಕು’ ಎಂದು ಹೇಳಿದ್ದು ವಿವಾದಕ್ಕೆ ಕಾರಣ ಆಗಿದೆ. ಈ ಬಗ್ಗೆ ಸಭೆ ನಡೆಸಲಾಗಿದ್ದು, ಸತೀಶ್ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ‘ನಾನು ಎಜುಕೇಷನ್ ಎಂಬ ಪದ ಬಳಸಿದ್ದಕ್ಕೆ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ನಾನು ಹೇಳಿದ ಎಜುಕೇಷನ್ ಎಂದರೆ ಸಿನಿಮಾದ ಜ್ಞಾನ. ನಾನು ಓದಿದ್ದು ಎಸ್​ಎಸ್​ಎಲ್​ಸಿ ಮಾತ್ರ. ನಮ್ಮ ತಾಯಿ ಓದಿಯೇ ಇಲ್ಲ. ಹಾಗಾಗಿ ಆ ರೀತಿ ಯಾರನ್ನೂ ಹೀಯಾಳಿಸುವಂತಹ ಮನಸ್ಥಿತಿ ನನಗೆ ಇಲ್ಲ. ನಾನು ಬಂದಿದ್ದು ಯಾವುದೋ ಕುಗ್ರಾಮದಿಂದ. 200-300 ರೂಪಾಯಿಗೆ ಸೀರಿಯಲ್ ಮಾಡಿಕೊಂಡು ಬಂದವನು. ಈ ನಿರ್ಮಾಪಕರೆಲ್ಲ ಚಿತ್ರರಂಗವನ್ನು ಕಟ್ಟಿದವರು. ಒಬ್ಬ ನಿರ್ಮಾಪಕರು ಚಿತ್ರರಂಗಕ್ಕೆ ಬರುವಾಗ ಸಿನಿಮಾದ ಜ್ಞಾನ ಬಹಳ ಮುಖ್ಯ ಆಗುತ್ತದೆ. ಆ ಬಗ್ಗೆ ನಾನು ಹೇಳಿದ್ದು ಅಷ್ಟೇ. ನಾನು ಕೂಡ ನಿರ್ಮಾಪಕನಾಗಿ 4 ಸಿನಿಮಾ ನಿರ್ಮಾಣ ಮಾಡಿದ್ದೇನೆ’ ಎಂದು ಸತೀಶ್ ನಿನಾಸಂ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More