ವಿಜಯದಶಮಿ, ಆಯುಧ ಪೂಜೆ ಸಂಭ್ರಮ: ಕೆ.ಆರ್. ಮಾರುಕಟ್ಟೆಯಲ್ಲಿ ಭಾರಿ ಜನಜಂಗುಳಿ, ಬೆಲೆ ಏರಿಕೆ ನಡುವೆಯೂ ಖರೀದಿ ಜೋರು
ಆಯುಧ ಪೂಜೆ, ವಿಜಯದಶಮಿ ಹಬ್ಬದ ಸಿದ್ಧತೆ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಜೋರಾಗಿದೆ. ಹೂವು, ಹಣ್ಣು, ತರಕಾರಿಗಳ ಬೆಲೆ ಗಗನಕ್ಕೇರಿದ್ದರೂ, ಜನ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಹಬ್ಬ ಸಮೀಪಿಸುತ್ತಿದ್ದಂತೆ ದರ ಮತ್ತಷ್ಟು ಹೆಚ್ಚಾಗುವ ಭೀತಿಯಿಂದ ಮುಂಚಿತವಾಗಿಯೇ ಅಗತ್ಯ ವಸ್ತುಗಳನ್ನು ಕೊಳ್ಳುತ್ತಿದ್ದಾರೆ. ಮಳೆ ಕಡಿಮೆಯಾಗಿರುವ ಕಾರಣ ವ್ಯಾಪಾರ ವಹಿವಾಟು ಬಿರುಸಾಗಿದೆ.
ಬೆಂಗಳೂರು, ಅಕ್ಟೋಬರ್ 18: ವಿಜಯದಶಮಿ ಹಾಗೂ ಆಯುಧ ಪೂಜೆ ಹಬ್ಬ ಸಮೀಪಿಸುತ್ತಿದ್ದಂತೆ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿದೆ. ಹೂವು, ಹಣ್ಣು ಮತ್ತು ತರಕಾರಿ ವ್ಯಾಪಾರ ಬಿರುಸಿನಿಂದ ಸಾಗಿದೆ. ಹಬ್ಬದ ದಿನಗಳಲ್ಲಿ ಬೆಲೆಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿರುವುದರಿಂದ, ಸಾರ್ವಜನಿಕರು ಈಗಾಗಲೇ ಅಗತ್ಯ ವಸ್ತುಗಳ ಖರೀದಿಗೆ ಮುಂದಾಗಿದ್ದಾರೆ. ಮಾರುಕಟ್ಟೆಯಲ್ಲಿ ಬೆಳಗ್ಗೆಯಿಂದಲೇ ಗ್ರಾಹಕರ ಭಾರಿ ಜನಜಂಗುಳಿ ಕಂಡುಬರುತ್ತಿದೆ. ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಹೂವು, ಹಣ್ಣುಗಳ ಬೆಲೆ ದುಪ್ಪಟ್ಟಾಗಿದೆ. ಬೆಲೆ ದುಬಾರಿಯಾಗಿದ್ದರೂ, ಹಬ್ಬವನ್ನು ಆಚರಿಸಲೇಬೇಕಾದ ಅನಿವಾರ್ಯತೆಯಿಂದ ಜನರು ಖರೀದಿಗೆ ಮುಗಿಬಿದ್ದಿದ್ದಾರೆ. ವ್ಯಾಪಾರಸ್ಥರು ಸಹ ಮಳೆಯ ನಡುವೆಯೂ ವ್ಯಾಪಾರ ಹೆಚ್ಚಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

