ಆಯುಧ ಪೂಜೆ ತಯಾರಿ ಖರೀದಿಗೆ ಮುಗಿಬಿದ್ದ ಜನ: ಕೆಆರ್ ಮಾರುಕಟ್ಟೆಯಲ್ಲಿ ಫುಲ್ ರಷ್, ಟ್ರಾಫಿಕ್ ಜಾಮ್
ಬೆಂಗಳೂರಿನ ಕೆ.ಆರ್. ಮಾರ್ಕೆಟ್‌ನಲ್ಲಿ ಆಯುಧ ಪೂಜೆ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಮಧ್ಯರಾತ್ರಿಯಿಂದಲೇ ಸಾವಿರಾರು ಜನರು ಹೂವು, ಹಣ್ಣು, ಬಾಳೆಕಂದು, ನಿಂಬೆಹಣ್ಣು, ಕುಂಬಳಕಾಯಿ ಸೇರಿದಂತೆ ವಿವಿಧ ಪೂಜಾ ಸಾಮಗ್ರಿಗಳಿಗಾಗಿ ಮುಗಿಬಿದ್ದಿದ್ದಾರೆ. ಜನಸಾಗರದಿಂದಾಗಿ ಮಾರುಕಟ್ಟೆ ಸುತ್ತಮುತ್ತ ತೀವ್ರ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ಬೆಂಗಳೂರು, ಅಕ್ಟೋಬರ್ 19: ನಾಡಿನೆಲ್ಲೆಡೆ ಆಯುಧ ಪೂಜೆ ಹಬ್ಬದ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನ ಕೆ.ಆರ್. ಮಾರ್ಕೆಟ್‌ನಲ್ಲಿ ಪೂಜಾ ಸಾಮಗ್ರಿಗಳ ಖರೀದಿಗೆ ಜನಸಾಗರವೇ ಹರಿದುಬಂದಿದೆ. ಮಧ್ಯರಾತ್ರಿಯಿಂದಲೇ ಹಬ್ಬದ ಖರೀದಿ ಭರಾಟೆ ಶುರುವಾಗಿದ್ದು, ಸಾವಿರಾರು ಜನರು ವಿವಿಧ ಬಗೆಯ ಹೂವು, ಹಣ್ಣುಗಳು, ಬೂದುಗುಂಬಳಕಾಯಿ, ನಿಂಬೆಹಣ್ಣು, ಬಾಳೆಕಂದು, ತುಳಸಿ ಹಾರ ಸೇರಿದಂತೆ ಆಯುಧ ಪೂಜೆಗೆ ಅಗತ್ಯವಿರುವ ವಸ್ತುಗಳನ್ನು ಕೊಂಡುಕೊಳ್ಳುತ್ತಿದ್ದಾರೆ.
ಕೆ.ಆರ್. ಮಾರ್ಕೆಟ್‌ನಲ್ಲಿ ತಾಜಾ ಮತ್ತು ವೈವಿಧ್ಯಮಯ ಹೂವುಗಳು, ಹಾರಗಳು ಹಾಗೂ ಪೂಜಾ ಸಾಮಗ್ರಿಗಳು ಸಗಟು ದರದಲ್ಲಿ ಲಭ್ಯವಿರುವುದರಿಂದ ಬೆಂಗಳೂರಿನ ಮೂಲೆ ಮೂಲೆಗಳಿಂದ ಜನರು ಇಲ್ಲಿಗೆ ಆಗಮಿಸುತ್ತಾರೆ. ಆಯುಧ ಪೂಜೆಗಾಗಿ ಜನರು ಉತ್ಸಾಹದಿಂದ ಸಿದ್ಧತೆ ನಡೆಸಿದ್ದಾರೆ. ಭಾರಿ ಜನಸಂದಣಿಯಿಂದಾಗಿ ಕೆ.ಆರ್. ಮಾರ್ಕೆಟ್ ಸುತ್ತಮುತ್ತ ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ವಾಹನ ಸವಾರರು ಗಂಟೆಗಟ್ಟಲೆ ರಸ್ತೆಯಲ್ಲಿ ಸಿಲುಕಿ ಪರದಾಡುತ್ತಿದ್ದಾರೆ. ವ್ಯಾಪಾರಿಗಳು ರಸ್ತೆಗಳನ್ನೇ ತಮ್ಮ ಅಂಗಡಿಗಳನ್ನಾಗಿ ಪರಿವರ್ತಿಸಿರುವುದರಿಂದ ಸಂಚಾರಕ್ಕೆ ಮತ್ತಷ್ಟು ಅಡಚಣೆಯಾಗಿದೆ. ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಅನುಪಸ್ಥಿತಿಯಿಂದ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಆಂಬುಲೆನ್ಸ್‌ಗಳ ಸಂಚಾರಕ್ಕೂ ತೊಂದರೆಯಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್ಗೆ ಡಿಕೆಶಿ ಕೌಂಟರ್
ಹೆಚ್ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ

