ಆಯುಧ ಪೂಜೆ, ವಿಜಯದಶಮಿ ಹಬ್ಬ ಹಿನ್ನೆಲೆ ಕೆ. ಆರ್ ಮಾರ್ಕೆಟ್​ನಲ್ಲಿ ಖರೀದಿ ಭರಾಟೆ ಜೋರು!

Updated on: Oct 20, 2026 | 8:55 AM

ಬೆಂಗಳೂರಿನ ಕೆ.ಆರ್. ಮಾರ್ಕೆಟ್‌ನಲ್ಲಿ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಹಿನ್ನೆಲೆ ಪೂಜಾ ಸಾಮಗ್ರಿಗಳ ಖರೀದಿಗೆ ಜನಸಾಗರವೇ ಹರಿದು ಬಂದಿದೆ. ಹೂವು, ಹಣ್ಣು, ನಿಂಬೆಹಣ್ಣು, ಕುಂಬಳಕಾಯಿ, ಬಾಳೆಕಂದುಗಳಂತಹ ವಸ್ತುಗಳನ್ನು ಖರೀದಿಸಲು ಜನರು ಮಧ್ಯರಾತ್ರಿಯಿಂದಲೇ ಜಮಾಯಿಸಿದ್ದಾರೆ. ಇದರ ಪರಿಣಾಮವಾಗಿ ಮಾರುಕಟ್ಟೆ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಬೆಂಗಳೂರು, ಅಕ್ಟೋಬರ್ 20: ನಾಡಿನೆಲ್ಲೆಡೆ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರ್ಕೆಟ್‌ನಲ್ಲಿ ಪೂಜಾ ಸಾಮಗ್ರಿಗಳ ಖರೀದಿಗೆ ಜನಸಾಗರವೇ ಹರಿದು ಬಂದಿದೆ. ಮಧ್ಯರಾತ್ರಿಯಿಂದಲೇ ಜನರು ಹೂವು, ಹಣ್ಣು, ನಿಂಬೆಹಣ್ಣು, ಕುಂಬಳಕಾಯಿ, ಬಾಳೆಕಂದು ಸೇರಿದಂತೆ ವಿವಿಧ ಪೂಜಾ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಬೆಂಗಳೂರಿನ ಸುತ್ತಮುತ್ತಲಿನ ರೈತರಿಂದ ನೇರವಾಗಿ ತಾಜಾ ಹೂವು ಮತ್ತು ಅಗ್ಗದ ದರದಲ್ಲಿ ಸಾಮಗ್ರಿಗಳು ಸಿಗುವ ಕಾರಣಕ್ಕಾಗಿ ಜನರು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.

ಜನಸಂದಣಿಯ ಕಾರಣದಿಂದಾಗಿ ಕೆ.ಆರ್. ಮಾರ್ಕೆಟ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಅವಿನ್ಯೂ ರಸ್ತೆ ಮತ್ತು ಕೆ.ಆರ್. ಮಾರ್ಕೆಟ್‌ನಿಂದ ಟೌನ್ ಹಾಲ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವ್ಯಾಪಾರಿಗಳು ರಸ್ತೆಗಳನ್ನೇ ಆಕ್ರಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ಆಂಬ್ಯುಲೆನ್ಸ್ ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟಾಗಿದೆ. ಹಬ್ಬದ ಪ್ರಯುಕ್ತ ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ ಮತ್ತು ಟ್ರಾಫಿಕ್ ಜಾಮ್ ಸಾಮಾನ್ಯವಾಗಿ ಕಂಡುಬರುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More