ಬಿಜೆಪಿಯವರು ತಾಕತ್ತಿದ್ದರೆ RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಬಿ.ಕೆ.ಹರಿಪ್ರಸಾದ್

Edited By:

Updated on: Aug 20, 2026 | 12:51 PM

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸದನ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ಆರೋಪಿಸಿ, ಬಿಜೆಪಿ ನಾಯಕರನ್ನು "ಹೇಡಿಗಳು" ಎಂದು ಕರೆದಿದ್ದಾರೆ. ವಂದೇ ಮಾತರಂ ಗೀತೆ ಸಂಬಂಧ ಕಾಂಗ್ರೆಸ್​​ ನಿರ್ಣಯದ ಬಗ್ಗೆಯೂ ಸ್ಪಷ್ಟಪಡಿಸಿದ ಅವರು, ಇವರು ನಮ್ಮನ್ನು ಗಲ್ಲಿಗಾದರೂ ಹಾಕಲಿ, ಜೈಲಿಗಾದರೂ ಹಾಕಲಿ. ನಾವು ಹಾಡುವುದು ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಎಂದು ಪುನರುಚ್ಛರಿಸಿದ್ದಾರೆ.

ಬೆಂಗಳೂರು, ಆಗಸ್ಟ್​​ 20: ಬಿಜೆಪಿಯವರು ತಾಕತ್ತಿದ್ದರೆ RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸವಾಲು ಹಾಕಿದ್ದಾರೆ. CWC ನಿರ್ಣಯವನ್ನು ಸ್ವಾಗತ ಮಾಡುತ್ತೇನೆ. ಇವರು ನಮ್ಮನ್ನು ಗಲ್ಲಿಗಾದರೂ ಹಾಕಲಿ, ಜೈಲಿಗಾದರೂ ಹಾಕಲಿ. ನಾವು ಹಾಡುವುದು ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ. ಈ ವಿಚಾರದಲ್ಲಿ ರಾಜಕೀಯ ಮಾಡುವವರೇ ದೇಶದ್ರೋಹಿಗಳು. CWC ಸಭೆಯಲ್ಲಿ ಸರಿಯಾದ ನಿರ್ಣಯ ತೆಗೆದುಕೊಂಡಿದ್ದಾರೆ. ಇವರೆಲ್ಲ ಕಂಗನಾ ರಣಾವತ್ ಅಭಿಮಾನಿಗಳು. ಕಂಗನಾ ಹಾಡನ್ನೇ ಬೇಕಿದ್ದರೆ ಸಂಸತ್​ಗೆ ತಂದು ರಾಷ್ಟ್ರಗೀತೆ ಮಾಡ್ತಾರೆ. ಬಿಜೆಪಿಯವರು ಪಾರ್ಲಿಮೆಂಟ್​ಗೆ ಬರುವ ಧೈರ್ಯವೂ ಇಲ್ಲದ ನರಹೇಡಿಗಳು ಎಂದವರು ವಾಗ್ದಾಳಿ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More