ವಾಲ್ಮೀಕಿ ಅಭಿವೃದ್ಧಿ ನಿಗಮದದ ಹಗರಣ: ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರು ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಗೆ ಹಾಜರಾಗಿದ್ದಾರೆ. ಮನಿ ಲಾಂಡರಿಂಗ್ ಆರೋಪದಡಿ ಇಡಿ ಸಮನ್ಸ್ ನೀಡಿತ್ತು. ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಿದ್ದರೂ, ಹೆಚ್ಚಿನ ಮಾಹಿತಿ ಮತ್ತು ದಾಖಲೆಗಳನ್ನು ಸಂಗ್ರಹಿಸಲು ಈ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರು, ಸೆಪ್ಟೆಂಬರ್ 07: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಬೆಂಗಳೂರಿನ ಜಾಲಹಳ್ಳಿಯ HMT ಲೇಔಟ್ನಲ್ಲಿರೋ ಇಡಿ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ. ಚಾರ್ಜ್‌ಶೀಟ್ ಬಳಿಕ ಮತ್ತಷ್ಟು ಮಾಹಿತಿ ಕೇಳಲು ಇಂದು ವಿಚಾರಣೆಗೆ ಹಾಜರಾಗುವಂತೆ ನಾಗೇಂದ್ರಗೆ ಇಡಿ ಸಮನ್ಸ್ ನೀಡಿತ್ತು. ಪ್ರಕರಣ ಸಂಬಂಧ ನಾಗೇಂದ್ರ 3 ತಿಂಗಳು ಜೈಲುವಾಸ ಅನುಭವಿಸಿದ್ದು, ಬಳಿಕ ಕೋರ್ಟ್ನಿಂದ ಜಾಮೀನು ಪಡೆದು ಹೊರಬಂದಿದ್ದರು. ಕೇಸ್ ಸಂಬಂದ ಇಡಿ ಅಧಿಕಾರಿಗಳು ಕೋರ್ಟ್ಗೆ ಪ್ರಾಥಮಿಕ ಚಾರ್ಜ್‌ಶೀಟ್ ಕೂಡ ಸಲ್ಲಿಸಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ

