ವಾಲ್ಮೀಕಿ ಅಭಿವೃದ್ಧಿ ನಿಗಮದದ ಹಗರಣ: ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ

Edited By:

Updated on: Sep 07, 2026 | 3:32 PM

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರು ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಗೆ ಹಾಜರಾಗಿದ್ದಾರೆ. ಮನಿ ಲಾಂಡರಿಂಗ್ ಆರೋಪದಡಿ ಇಡಿ ಸಮನ್ಸ್ ನೀಡಿತ್ತು. ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಿದ್ದರೂ, ಹೆಚ್ಚಿನ ಮಾಹಿತಿ ಮತ್ತು ದಾಖಲೆಗಳನ್ನು ಸಂಗ್ರಹಿಸಲು ಈ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರು, ಸೆಪ್ಟೆಂಬರ್​​ 07: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಬೆಂಗಳೂರಿನ ಜಾಲಹಳ್ಳಿಯ HMT ಲೇಔಟ್​ನಲ್ಲಿರೋ ಇಡಿ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ. ಚಾರ್ಜ್​ಶೀಟ್ ಬಳಿಕ ಮತ್ತಷ್ಟು ಮಾಹಿತಿ ಕೇಳಲು ಇಂದು ವಿಚಾರಣೆಗೆ ಹಾಜರಾಗುವಂತೆ ನಾಗೇಂದ್ರಗೆ ಇಡಿ ಸಮನ್ಸ್ ನೀಡಿತ್ತು. ಪ್ರಕರಣ ಸಂಬಂಧ ನಾಗೇಂದ್ರ 3 ತಿಂಗಳು ಜೈಲುವಾಸ ಅನುಭವಿಸಿದ್ದು, ಬಳಿಕ ಕೋರ್ಟ್​​ನಿಂದ ಜಾಮೀನು ಪಡೆದು ಹೊರಬಂದಿದ್ದರು. ಕೇಸ್​​ ಸಂಬಂದ ಇಡಿ ಅಧಿಕಾರಿಗಳು ಕೋರ್ಟ್​ಗೆ ಪ್ರಾಥಮಿಕ ಚಾರ್ಜ್​ಶೀಟ್ ಕೂಡ ಸಲ್ಲಿಸಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us