ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ

Updated By: ಮದನ್​ ಕುಮಾರ್​

Updated on: Jul 14, 2025 | 10:24 PM

ಬಿ. ಸರೋಜಾದೇವಿ ಅವರ ಹುಟ್ಟೂರಾದ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೆ ಸಕಲ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಚನ್ನಪಟ್ಟಣದ ದಶವಾರದಲ್ಲಿ ಇರುವ ತೋಟದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ. ಇದೇ ಜಾಗದಲ್ಲಿ ಬಿ. ಸರೋಜಾದೇವಿ ಅವರ ತಾಯಿ ರುದ್ರಮ್ಮ ಸಮಾಧಿ ಕೂಡ ಇದೆ.

ನಟಿ ಬಿ. ಸರೋಜಾದೇವಿ (B Saroja Devi) ಅವರ ಹುಟ್ಟೂರಾದ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೆ ಸಕಲ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಚನ್ನಪಟ್ಟಣದ ದಶವಾರದಲ್ಲಿ ಇರುವ ಅವರ ತೋಟದಲ್ಲೇ ಅಂತ್ಯಕ್ರಿಯೆ (B Saroja Devi Funeral) ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ. ಇದೇ ಜಾಗದಲ್ಲಿ ಬಿ. ಸರೋಜಾದೇವಿ ಅವರ ತಾಯಿ ರುದ್ರಮ್ಮ ಸಮಾಧಿ ಕೂಡ ಇದೆ. ಮಂಗಳವಾರ (ಜುಲೈ 15) ಮಧ್ಯಾಹ್ನ ಒಕ್ಕಲಿಗ ಸಂಪ್ರದಾಯದಂತೆ ಬಿ. ಸರೋಜಾದೇವಿ ಅವರ ಅಂತಿಮ ಸಂಸ್ಕಾರ ನಡೆಯುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.