ಸರೋಜಾದೇವಿ ಅವರೊಂದಿಗಿನ ನೆನಪಿನ ಬುತ್ತಿ ಬಿಚ್ಚಿಟ್ಟ ನಟ ಜಗ್ಗೇಶ್
ಹಿರಿಯ ನಟಿ ಬಿ. ಸರೋಜಾದೇವಿ ಅವರು 87ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಅಭಿನಯಿಸಿದ ಅವರು ಅಭಿನಯ ಸರಸ್ವತಿ ಎಂದೇ ಪ್ರಸಿದ್ಧರಾಗಿದ್ದರು. ನಟ ಜಗ್ಗೇಶ್ ಅವರು ಸರೋಜಾದೇವಿ ಅವರೊಂದಿಗಿನ ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ.
ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ (B Saroja Devi) ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಅವರ ಈ ಅಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿಯುತ್ತಿದೆ. ಅಂತಿಮ ದರ್ಶನ ಪಡೆದು ಮಾತನಾಡಿದ ಹಿರಿಯ ನಟ ಜಗ್ಗೇಶ್, ‘ಭಾರತೀಯ ಚಿತ್ರರಂಗದಲ್ಲಿ ಬಹಳ ದೊಡ್ಡ ಹೆಸರು ಮಾಡಿದವರು. ತಮಿಳುನಾಡು ಚಿತ್ರರಂಗದಲ್ಲೂ ಬಹುದೊಡ್ಡ ಹೆಸರು ಮಾಡಿದ್ದರು. ಸರೋಜಾದೇವಿ ಜತೆ ನನಗೂ ಒಳ್ಳೆಯ ಬಾಂಧವ್ಯ ಇತ್ತು. ಮನೆಗೆ ಕರೆದು ದೋಸೆ ಮಾಡಿ ತಿನ್ನಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕೊಡಿಗೇಹಳ್ಳಿಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ’ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 14, 2025 11:47 AM
Latest Videos
