ಇದೇ ಹಾಲಲ್ಲಿ ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದರು; ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಯೋಗ ಗುರು ರಾಮ್‌ದೇವ್ ಕತ್ತೆ ಹಾಲಿನ ಪ್ರಯೋಜನಗಳನ್ನು ಎತ್ತಿ ತೋರಿಸಿದ್ದಾರೆ. ಈಜಿಪ್ಟ್ ರಾಣಿ ಕ್ಲಿಯೋಪಾತ್ರರನ್ನು ಉಲ್ಲೇಖಿಸಿದ ಅವರು ಸೌಂದರ್ಯವರ್ಧಕ ಕ್ಲಿಯೋಪಾತ್ರ ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದರು ಎಂದಿದ್ದಾರೆ.
ಯೋಗ ಗುರು ಬಾಬಾ ರಾಮ್‌ದೇವ್ ಅವರು ದೂರದರ್ಶನ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ಧ ವ್ಯಕ್ತಿಯಾಗಿದ್ದಾರೆ. ಪತಂಜಲಿ ಉತ್ಪನ್ನಗಳನ್ನು ಪ್ರಚಾರ ಮಾಡಲು ಮತ್ತು ಜೀವನಶೈಲಿ ಸಂಬಂಧಿತ ಸಮಸ್ಯೆಗಳಿಗೆ ಆಯುರ್ವೇದ ಚಿಕಿತ್ಸೆಗಳಿಗೆ ಜನಪ್ರಿಯರಾಗಿರುವ ರಾಮ್‌ದೇವ್ ಕತ್ತೆ ಹಾಲನ್ನು ಕರೆದು, ಸೇವಿಸಿದ್ದಾರೆ. ಈಜಿಪ್ಟ್ ರಾಣಿ ಕ್ಲಿಯೋಪಾತ್ರ ತಮ್ಮ ಸೌಂದರ್ಯ ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದರು. ಈ ಹಾಲಿನಲ್ಲಿ ಅನೇಕ ಆರೋಗ್ಯಕರ ಅಂಶಗಳಿವೆ ಎಂದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ