Babar Azam: 0, 1, 2… ಬಂದ ಬಾಬರ್, ಹೋದ ಬಾಬರ್
PSL 2025 Multan Sultans vs Peshawar Zalmi: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪೇಶಾವರ್ ಝಲ್ಮಿ ತಂಡ 20 ಓವರ್ಗಳಲ್ಲಿ 227 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಮುಲ್ತಾನ್ ಸುಲ್ತಾನ್ಸ್ ತಂಡ 15.5 ಎಸೆತಗಳಲ್ಲಿ 107 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬಾಬರ್ ನಾಯಕತ್ವದ ಪೇಶಾವರ್ ಝಲ್ಮಿ ತಂಡ 120 ರನ್ಗಳ ಅಮೋಘ ಗೆಲುವು ದಾಖಲಿಸಿದೆ.
ಟಿ20 ಕ್ರಿಕೆಟ್ನಲ್ಲಿ ಬಾಬರ್ ಆಝಂ (Babar Azam) ಕಳಪೆ ಫಾರ್ಮ್ ಮುಂದುವರೆದಿದೆ. ತವರಿನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ಸೂಪರ್ ಲೀಗ್ನಲ್ಲೂ (PSL 2025) ಬಾಬರ್ ಬ್ಯಾಟ್ನಿಂದ ರನ್ ಬರುತ್ತಿಲ್ಲ. ಅದರಲ್ಲೂ ಕ್ರೀಸ್ ಕಚ್ಚಿ ನಿಲ್ಲಲು ಕೂಡ ಪರಾಡುತ್ತಿದ್ದಾರೆ. ಪೇಶಾವರ್ ಝಲ್ಮಿ ತಂಡದ ನಾಯಕನಾಗಿ ಕಣಕ್ಕಿಳಿಯುತ್ತಿರುವ ಬಾಬರ್ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು.
ಇನ್ನು ದ್ವಿತೀಯ ಪಂದ್ಯದಲ್ಲಿ ಕಲೆಹಾಕಿದ್ದು ಕೇವಲ ಒಂದು ರನ್ ಮಾತ್ರ. ಇದೀಗ ಮುಲ್ತಾನ್ ಸುಲ್ತಾನ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಕೇವಲ 2 ರನ್ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಅಂದರೆ ಮೊದಲ ಮೂರು ಪಂದ್ಯಗಳಲ್ಲಿ ಬಾಬರ್ ಕಲೆಹಾಕಿದ್ದು ಕೇವಲ 3 ರನ್ಗಳು ಮಾತ್ರ.
ಅದರಲ್ಲೂ ಈ ಮೂರು ಪಂದ್ಯಗಳಲ್ಲಿ ಬಾಬರ್ ಆಝಂ ಎದುರಿಸಿರುವುದು 10 ಎಸೆತಗಳನ್ನು ಮಾತ್ರ. ಅಂದರೆ ಕ್ರೀಸ್ ಕಚ್ಚಿ ನಿಲ್ಲಲು ಸಹ ಬಾಬರ್ ಪರದಾಡುತ್ತಿದ್ದಾರೆ. ಇದುವೇ ಈಗ ಪೇಶಾವರ್ ಝಲ್ಮಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.
ಇನ್ನು ಬಾಬರ್ ಆಝಂ ಅವರ ವೈಫಲ್ಯದ ಹೊರತಾಗಿಯೂ ಮುಲ್ತಾನ್ ಸುಲ್ತಾನ್ಸ್ ವಿರುದ್ಧ ಗೆಲುವು ದಾಖಲಿಸುವಲ್ಲಿ ಪೇಶಾವರ್ ಝಲ್ಮಿ ತಂಡ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪೇಶಾವರ್ ಝಲ್ಮಿ ತಂಡ 20 ಓವರ್ಗಳಲ್ಲಿ 227 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಮುಲ್ತಾನ್ ಸುಲ್ತಾನ್ಸ್ ತಂಡ 15.5 ಎಸೆತಗಳಲ್ಲಿ 107 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬಾಬರ್ ನಾಯಕತ್ವದ ಪೇಶಾವರ್ ಝಲ್ಮಿ ತಂಡ 120 ರನ್ಗಳ ಅಮೋಘ ಗೆಲುವು ದಾಖಲಿಸಿದೆ.

ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು

ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್ಗೆ ಉಳಿಗಾಲವಿಲ್ಲ: ವಾಟಾಳ್

ಅಲ್ಲು ಅರ್ಜುನ್ ಜೊತೆ ಎಕ್ಸ್ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ

ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
