ಇಬ್ಬರು ಮಹಿಳಾ ಪೊಲೀಸ್ ಪೇದೆಗೆ ಠಾಣೆಯಲ್ಲಿ ಸೀಮಂತ ಕಾರ್ಯ..!
ಪೊಲೀಸರೆಂದರೆ ದಿನದ 24 ಗಂಟೆಯೂ ಕೆಲಸ ಮಾಡುವವರು. ಇಂತವರಿಗೆ ಸಮಯವೇ ಇರುವುದಿಲ್ಲ. ಇದರ ನಡುವೆಯೂ ಮಹಿಳಾ ಪೇದೆಗಳಿಗೆ ಠಾಣೆಯಲ್ಲೇ ಸೀಮಂತ ಮಾಡಿದ ಅಪರೂಪದ ಪ್ರಸಂಗವೊಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಮಂಡ್ಯ,(ಅಕ್ಟೋಬರ್ 29): ಪೊಲೀಸರೆಂದರೆ ದಿನದ 24 ಗಂಟೆಯೂ ಕೆಲಸ ಮಾಡುವವರು. ಇಂತವರಿಗೆ ಸಮಯವೇ ಇರುವುದಿಲ್ಲ. ಇದರ ನಡುವೆಯೂ ಮಹಿಳಾ ಪೇದೆಗಳಿಗೆ ಠಾಣೆಯಲ್ಲೇ ಸೀಮಂತ ಮಾಡಿದ ಅಪರೂಪದ ಪ್ರಸಂಗವೊಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪೊಲೀಸ್ ಸಿಬ್ಬಂದಿ ಶಾರದಾ ಮತ್ತು ಅಸ್ಮಬಾನು ಎಂಬ ಇಬ್ಬರು ಗರ್ಭಿಣಿ ಮಹಿಳಾ ಪೇದೆಗಳಿಗೆ ಸೀಮಂತ ಕಾರ್ಯ ಮಾಡಿ ಶುಭ ಹಾರೈಸಿದರು. ಇನ್ಸ್ ಪೆಕ್ಟರ್ ಸುಮಾರಾಣಿ ಅವರು ಇಬ್ಬರು ಮಹಿಳಾ ಪೇದೆಗಳಿಗೆ ಉಡಿ ತುಂಬಿ, ಮಡಿಲಕ್ಕಿ ಹಾಕಿ, ಕೊಬ್ಬರಿ ಬೆಲ್ಲ, ತೆಂಗಿನಕಾಯಿ, ಅರಿಶಿಣ-ಕುಂಕುಮ ಹಾಗೂ ಬಳೆಗಳನ್ನು ನೀಡಿ ಸೀಮಂತ ಮಾಡುವುದರೊಂದಿಗೆ ಬೀಳ್ಕೊಟ್ಟರು.